ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

Date:

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಅತ್ಯಂತ ಹೀನ ಮತ್ತು ಅಕ್ಷಮ್ಯ ಕೃತ್ಯವಾಗಿದೆ. ಕೆಲಸ ಅರಸಿ ಬೇರೆ ರಾಜ್ಯಗಳಿಂದ ಬಂದು ಮುಗ್ಧ ಮಕ್ಕಳನ್ನೇ ಗುರಿಯಾಗಿಸಿಕೊಂಡು ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರವಾರ ತಾಲೂಕು ಅಧ್ಯಕ್ಷ ನರೇಂದ್ರ ತಳೇಕರ ಹಾಗೂ ಕಾರವಾರ ನಗರ ಘಟಕದ ಅಧ್ಯಕ್ಷ ರಾಜಾ ನಾಯ್ಕ ಆಗ್ರಹಿಸಿದ್ದಾರೆ.

- Advertisement -

ಮಾಜಾಳಿಯಲ್ಲಿ ಹೇರ್ ಕಟಿಂಗ್ ಸಲೂನ್ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಸಂಶಾದ್ ಎಂಬಾತ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮುಗ್ಧ ಮಕ್ಕಳ ಸುರಕ್ಷತೆಗೆ ಧಕ್ಕೆ ತರುವ ಇಂತಹ ದುಷ್ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.
ಬೇರೆ ರಾಜ್ಯಗಳಿಂದ ಬಂದು ಸ್ಥಳೀಯವಾಗಿ ಉದ್ಯೋಗ ಮಾಡಿಕೊಂಡಿರುವ ಕೆಲವರು ದಬ್ಬಾಳಿಕೆ, ಶೋಷಣೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದಂತಹ ಕೃತ್ಯಗಳಲ್ಲಿ ತೊಡಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿರುವುದು ಗಂಭೀರ ವಿಚಾರವಾಗಿದೆ. ಪೊಲೀಸರು ವಿಳಂಬ ಮಾಡದೇ ಆರೋಪಿಯು ಎಲ್ಲೇ ಅಡಗಿದ್ದರೂ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಸಮಾಜದಲ್ಲಿ ಯಾವುದೇ ರೀತಿಯ ಕ್ಷಮೆ ಅಥವಾ ರಕ್ಷಣೆ ಇರಬಾರದು ಎಂದು ನರೇಂದ್ರ ತಳೇಕರ ಹಾಗೂ ರಾಜಾ ನಾಯ್ಕ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ

ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ...

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ...

ರಾಯಚೂರು | ಸೂಫಿ ಸಂತರು, ಶರಣರು ಹಾಗೂ ಚಿಂತಕರ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಅಜಯ್ ಧರ್ಮಸಿಂಗ್

ಜಿಲ್ಲೆ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಸೂಫಿ...

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...