ಬಾಲಕಾರ್ಮಿಕ ರಕ್ಷಣೆ ಕಾರ್ಯಾಚರಣೆ: ಮೂವರು ಕಿಶೋರ ಕಾರ್ಮಿಕರು ಪತ್ತೆ

Date:

ಸಾರ್ವಜನಿಕರ ದೂರಿನ ಮೇರೆಗೆ ಬಾಲಕಾರ್ಮಿಕರ ರಕ್ಷಣೆ ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ 3 ಸಂಸ್ಥೆಗಳಲ್ಲಿ ಮೂವರು ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

- Advertisement -

ಮಂಗಳೂರು ನಗರದ ಸ್ಟೇಟ್‍ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ ಸೋಮವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಸಮಿತಿ ಸದಸ್ಯರು, ತಹಶೀಲ್ದಾರರ ನೇತೃತ್ವದಲ್ಲಿ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್‌ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈಲ್ಡ್ ಹೆಲ್ಪ್‍ಲೈನ್ ಸಿಬ್ಬಂದಿಗಳು ಬಾಲಕಾರ್ಮಿಕ ರಕ್ಷಣೆ ಕಾರ್ಯಾಚರಣೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದು, “ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗಾಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆಯನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಸಂಸ್ಥೆಯಲ್ಲಿ ದುಡಿಯುತ್ತಿರುವುದನ್ನು ನಿಯಂತ್ರಿಸಲಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | 62 ನೂತನ ಹಾಸ್ಟೆಲ್ ಮಂಜೂರು: ಎಸ್ಎಫ್ಐ ಸಂಘಟನೆಯ ಹೋರಾಟಕ್ಕೆ ಸಂದ ಜಯ

“ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್‌ಐಆರ್ ದಾಖಲಿಸಲಾಗುತ್ತದೆ.
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಚೈಲ್ಡ್‍ಲೈನ್:1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆ:- 0824-2435343, 2433132, 2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ 2433131ಕ್ಕೆ ಕರೆ ಮಾಡಿ ತಿಳಿಸಬಹುದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...