ಬೆಳಗಾವಿಗೆ ‘ಬಾಲ್ಯ ವಿವಾಹ’ದ ಪಿಡುಗು; 361 ಬಾಲಕಿಯರು ಗರ್ಭಿಣಿಯರು

Date:

Advertisements

ಬಾಲ್ಯ ವಿವಾಹಗಳಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ. ಅದರಲ್ಲೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಿದೆ. ಇದರ ಜೊತೆ, ಹರಿಹರೆಯದ ಬಾಲಕಿಯರು ಹೆಚ್ಚಾಗಿ ಗರ್ಭ ಧರಿಸಿರುವ ಜಿಲ್ಲೆ ಎಂಬ ಕುಖ್ಯಾತಿಯನ್ನೂ ಬೆಳಗಾವಿ ಗಳಿಸಿದೆ.

ಜಿಲ್ಲೆಯಲ್ಲಿ 18ನೇ ವರ್ಷಕ್ಕೆ ಕಾಲಿಡುವ ಮುನ್ನವೇ ಹಲವಾರು ಬಾಲಕಿಯರು ಮಕ್ಕಳನ್ನು ಹೆರುತ್ತಿದ್ದಾರೆ. ಕಳೆದ 19 ತಿಂಗಳಲ್ಲಿ 361 ಬಾಲಕಿಯರು ಜಿಲ್ಲೆಯಲ್ಲಿ ಗರ್ಭ ಧರಿಸಿದ್ದಾರೆ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌) ಪೋರ್ಟಲ್‌ನ ಅಂಕಿ–ಅಂಶಗಳು ತಿಳಿಸಿವೆ.

ಅಂದಹಾಗೆ, 2023ರ ಏಪ್ರಿಲ್ ಮತ್ತು ಆಗಸ್ಟ್‌ ನಡುವೆ (ಐದು ತಿಂಗಳು) 12 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಇನ್ನೂ ದಾಖಲೆಗಳಿಗೆ ಸಿಗದೇ ಇರುವ ಹಲವು ಬಾಲ್ಯವಿವಾಹಗಳು ನಡೆದಿರುವ ಸಾಧ್ಯತೆಗಳಿವೆ. ಆದರೆ, ಕಾನೂನಾತ್ಮಕವಾಗಿ ಬಾಲ್ಯವಿವಾಹ ಅಪರಾಧವಾಗಿದ್ದರೂ, ಅವುಗಳನ್ನು ತಡೆಗಟ್ಟುವಲ್ಲಿ ಮತ್ತು ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತಳೆದಿರುವುದು ಇಂತಹ ಪ್ರಕರಣಗಳು ಮುಂದುವರೆಯಲು ಕಾರಣವಾಗಿವೆ ಎಂದು ಹೇಳಲಾಗಿದೆ.

Advertisements

ಬೆಳಗಾವಿ ಜಿಲ್ಲೆಯಲ್ಲಿ 2022ರ ಏಪ್ರಿಲ್ ಮತ್ತು 2023ರ ಮಾರ್ಚ್‌ ನಡುವೆ 81,817 ಮಹಿಳೆಯರು ಗರ್ಭ ಧರಿಸಿದ್ದಾರೆ. ಅವರಲ್ಲಿ 208 ಬಾಲಕಿಯರಾಗಿದ್ದಾರೆ. 2023ರ ಏಪ್ರಿಲ್‌ 1ರಿಂದ ಅಕ್ಟೋಬರ್‌ 31ರ ಅವಧಿಯಲ್ಲಿ 51,468 ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ, 153 ಬಾಲಕಿಯರಿದ್ದಾರೆ ಎಂದು ಆರ್‌ಸಿಎಚ್‌ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಬಾಲ್ಯ ವಿವಾಹ | ಕರ್ನಾಟಕಕ್ಕೆ ಅಗ್ರ ಸ್ಥಾನ; NFHS ವರದಿ ಹೇಳುತ್ತಿರುವುದೇನು?

ಬಾಲ್ಯವಿವಾಹ ಮತ್ತು ಬಾಲ್ಯದಲ್ಲೇ ಗರ್ಭಧಾರಣೆಯ ಬಗ್ಗೆ ಜಾಗೃತಿ ಅಭಿಯಾನಗಳನ್ನು ನಡೆಸುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಅವರ ನಿರ್ಲಕ್ಷ್ಯತನದಿಂದಾಗಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೋರಾಟಗಾರ್ತಿ ಪ್ರಮೋದಾ ಹಜಾರೆ ಕಿಡಿಕಾರಿದ್ದಾರೆ.

“ಗರ್ಭಿಣಿಯರ ನೋಂದಣಿ ಸಮಯದಲ್ಲಿ ಬಾಲಕಿಯರು ಗರ್ಭ ಧರಿಸಿರುವ ಬಗ್ಗೆ ಗೊತ್ತಾಗಿದೆ. ಬಾಲ ಗರ್ಭಿಣಿಯರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೂ ಮಾಹಿತಿ ಕೊಡುತ್ತಿದ್ದೇವೆ. ಇಲಾಖೆಯು ಬಾಲಕಿಯರ ಪತಿ ಸೇರಿದಂತೆ ಕುಟುಂಬಸ್ಥರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸುತ್ತಿದ್ದಾರೆ’’ ಎಂದು ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚೇತನ ಕಂಕಣವಾಡಿ ಹೇಳಿರುವುದಾಗಿ ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X