ಉಡುಪಿ | ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ : ಡಾ. ತಿಪ್ಪೇಸ್ವಾಮಿ ಕೆ.ಟಿ

Date:

Advertisements

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.

ಅವರು ಇಂದು ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ ವಿಷಯದ ಕುರಿತು ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಕ್ಕಳು ಅತೀ ಹೆಚ್ಚಿನ ಸಮಯವನ್ನು ಮನೆ, ಶಾಲೆ ಹಾಗೂ ಅವರ ನೆರೆಹೊರೆಯವರೊಂದಿಗೆ ಕಳೆಯುತ್ತಾರೆ. ಮಕ್ಕಳ ರಕ್ಷಣೆಗಾಗಿ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಭೌತಿಕ ಅಪಘಾತ, ದೌರ್ಜನ್ಯ ಸೇರಿದಂತೆ ಮತ್ತಿತರ ಕೆಲವೊಂದು ದುರ್ಘಟನೆಗಳು ಕಂಡುಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶಾಲಾ ಆವರಣ ಹಾಗೂ ಶಾಲಾ ಚಟುವಟಿಕೆಯ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ನೀಡಿರುವ ಮಾರ್ಗಸೂಚನೆಗಳನ್ನು ಇಲಾಖೆಗಳೊಂದಿಗೆ ಸಮನ್ವಯತೆ ಹೊಂದಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದರಿಂದ ಮಕ್ಕಳ ಮೇಲೆ ಉಂಟಾಗುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದರು.

Advertisements

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿಯ ನಿಯಮಾವಳಿಗಳನ್ನು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಸಿ.ಎಂ, ಅಲ್ಪಸಂಖ್ಯಾತ, ಸಮಾಜಕಲ್ಯಾಣ, ಕೋಚಿಂಗ್ ಸೆಂಟರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜನವರಿ 30 ರ ಒಳಗೆ ಅನುಷ್ಠಾನಗೊಳಿಸಿ, ಅದರ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದ ಅವರು, ಆಯೋಗವು ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವರದಿಯನ್ನು ಅನುಷ್ಠಾನ ಮಾಡದಿರುವುದು ಕಂಡುಬAದಲ್ಲಿ ಹಾಗೂ ತಪ್ಪು ಮಾಹಿತಿ ನೀಡಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದು, ಜನವರಿ 30 ರ ಒಳಗಾಗಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಜಿಲ್ಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಅನುಷ್ಠಾನ ಮಾಡುವುದರೊಂದಿಗೆ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗುವಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಮಾತನಾಡಿ, ಕಾನೂನಿನ ಬಗ್ಗೆ ಅರಿವು ಹೊಂದುವ ಅಗತ್ಯತೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಕಾನೂನಿನ ಸಾಮಾನ್ಯ ಜ್ಞಾನವನ್ನು ಹೊಂದಿದಾಗ ಶಾಲೆಯಲ್ಲಿ ಕಲಿಯುವಂತಹ ಸಂದರ್ಭದಲ್ಲಿ ಮಕ್ಕಳ ಮೇಲೆ ಆಗುವ ನೇರ ಅಥವಾ ಪರೋಕ್ಷ ದೌರ್ಜನ್ಯಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದ ಅವರು, ಕಾರ್ಯಾಗಾರವು ಕಾನೂನಿನ ಬಗ್ಗೆ ಅರಿವು ಮೂಡಿಸುವ ಮಹತ್ವದ ಉದ್ದೇಶ ಹೊಂದಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆದ ಅಧಿಕಾರಿಗಳು ತಮ್ಮ ಸೇವೆಯಲ್ಲಿ ಅಳವಡಿಸಿಕೊಂಡು ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಅವರ ಬಾಲ್ಯದ ಅಮೂಲ್ಯ ಕ್ಷಣಗಳನ್ನು ಸವಿಯಲು ಅನುವು ಮಾಡಿಕೊಡಬೇಕು. ಸಮಾಜದಲ್ಲಿ ಆಗುವ ಬದಲಾವಣೆಗೆ ಸಂಬಂಧಿಸಿದಂತೆ ಕಾಯಿದೆಗಳು ಆಗಾಗ ತಿದ್ದುಪಡಿ ಆಗುತ್ತಿರುತ್ತವೆ. ಆದ್ದರಿಂದ ಕಾರ್ಯಾಗಾರದಲ್ಲಿ ಭಾಗವಹಿಸುವ ಅಧಿಕಾರಿಗಳು ಮಾಹಿತಿ ಪಡೆದು ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಮಾತ್ರ ಕಾರ್ಯಾಗಾರಗಳು ಯಶಸ್ವಿಯಾಗುತ್ತವೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಯುನಿಸೆಫ್‌ನ ಸಿಸ್ಟರ್ ದುಲ್ಸಿನಾ ಕ್ರಾಸ್ತಾ ಮಕ್ಕಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ವಹಿಸಬೇಕಾದ ಸೂಕ್ಷ್ಮತೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಎಸ್‌ಪಿ ಸಿದ್ದಲಿಂಗಪ್ಪ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ, ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ಮನುಪಟೇಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹಮದ್, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಜ್ಯೋತಿ ನಿರೂಪಿಸಿ, ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X