ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

Date:

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಸೋಮವಾರ ಕರೆ ನೀಡಿದ ಚಿಂಚೋಳಿ ಬಂದ್‌ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್‌ ಶಾ ಅವರ ಶವಯಾತ್ರೆ ಅಣಕು ಶವಯಾತ್ರೆ ನಡೆಸಿ, ಭಾವಚಿತ್ರ ಪ್ರತಿಕೃತಿ ದಹಿಸಲಾಯಿತು.

- Advertisement -

ನಾಗರಿಕ ಹಿತರಕ್ಷಣಾ ಸಮಿತಿ ಕರೆ ನೀಡಿದ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ಬೆಳಿಗ್ಗೆ 6 ರಿಂದ ಪ್ರತಿಭಟನೆ ಆರಂಭಿಸಿದ ಹೋರಾಟಗಾರರು, ಮಧ್ಯಾಹ್ನ 2 ಗಂಟೆವರೆಗೆ ಪಾದಯಾತ್ರೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್‌ ಶಾಂತಿಯುತವಾಗಿ ನಡೆಯಿತು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
WhatsApp Image 2025 01 07 at 12.25.01 AM

ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಬೆಳ್ಳಿಗೆಯಿಂದಲೇ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಚ್ಚಿ ಬಂದ್‌ಗೆ ಬೆಂಬಲಿಸಿದರು. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿತ್ತು.

ಪಟ್ಟಣದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಅಮಿತ್‌ ಶಾ ಅವರ ಅಣಕು ಶವಯಾತ್ರೆ ನಡೆಸಿ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶವವನ್ನು ದಹಿಸಿ ಆಕ್ರೋಶ ಹೊರ ಹಾಕಿದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಗಡಿಪಾರು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಹಳಷ್ಟು ಮಾಧ್ಯಮಗಳು ಉದ್ದಿಮೆಯಾಗಿ ಬದಲಾಗಿವೆ: ಶಾಸಕ ಬಿ ಆರ್ ಪಾಟೀಲ್‌

ಪ್ರತಿಭಟನೆಯಲ್ಲಿ ಪ್ರಮುಖರಾದ ಕನ್ನಡ ಪರ ಸಂಘಟನೆಯ ಮುಖಂಡ ಸಚಿನ್ ರಾಠೋಡ್, ತಾಲ್ಲೂಕು ಬಂಜಾರಾ ಸಮಾಜದ ಅಧ್ಯಕ್ಷ ರಾಮಶೆಟ್ಟಿ ಪವಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶರಣು ಪಾಟೀಲ್ ರವಿ ಪೋತಕಪಳ್ಳಿ, ತಾಲ್ಲೂಕು ಕೋಲಿ ಸಮಾಜದ ಮುಖಂಡ ಅನೀಲಕುಮಾರ ಪಾಟೀಲ್ ಹಾಗೂ ಪ್ರಮುಖರಾದ ಗೋಪಾಲ್ ರಾಂಪೂರೆ, ಕಾಮರಾವ್ ಕೊರವಿ, ಗೌತಮ್ ಬೊಮ್ಮನಳ್ಳಿ ಮಾರುತಿ ಗಂಜಗಿರಿ, ಸಂತೋಷ್ ಗುತ್ತೇದಾರ್, ಮಾಣಿಕರಾವ್ ಗುಲಗುಂಜಿ, ಮುಸ್ಲಿಂ ಸಮಾಜದ ಮುಖಂಡ ಅಬ್ದುಲ್ ಬಾಸಿತ್, ರೈತ ಸಂಘಟನೆ ಶರಣಬಸಪ್ಪ ಮಮ್ಮಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...