ಚಿಂತಾಮಣಿ | ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ:ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ!

Date:

ಚಿಂತಾಮಣಿ ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ವಿವಿಧ ಸಹಕಾರ ಸಂಘಗಳ ಹೆಸರಿನಲ್ಲಿ ನಡೆದಿದೆ ಎನ್ನಲಾದ ಸುಮಾರು 11 ಕೋಟಿ ರೂಪಾಯಿಗಳ ಬೃಹತ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

ದಾಳಿಯ ವೇಳೆ ಅಧಿಕಾರಿಗಳು ಹಗರಣಕ್ಕೆ ಸಂಬಂಧಿಸಿದ ವಿವಿಧ ಕಡತಗಳನ್ನು ಪರಿಶೀಲಿಸಿ,ಹಲವು ಮಹತ್ತರ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಹಿಂದೆ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೆ ತಂದಿದ್ದರು.ಈ ಯೋಜನೆಯನ್ನೇ ನೆಪವಾಗಿಟ್ಟುಕೊಂಡು ಚಿಂತಾಮಣಿ ತಾಲೂಕಿನ ಯನಮಲಪಾಡಿ, ಬೊಮ್ಮನಹಳ್ಳಿ,ಅಂಕಲಮೊಡುಗು,ನಂದಿಗಾನಹಳ್ಳಿ, ವೈಜಕೂರು,ಹುಲುಗುಮ್ಮನಹಳ್ಳಿ ಹಾಗೂ ಕುರುಬೂರು ವಿಎಸ್‌ಎಸ್‌ಎನ್ ಸೊಸೈಟಿಗಳಲ್ಲಿ ಸುಮಾರು11 ಕೋಟಿ ರೂ.ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ತಳಗವಾರ ಪ್ರತಾಪ್ ಕುಮಾರ್ ಅವರು 2025ರಲ್ಲಿ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ನಿಯಮಾವಳಿಗಳ ಪ್ರಕಾರ 2 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಹಗರಣದ ತನಿಖೆ ಸಿಐಡಿಗೆ ಒಳಪಡುವ ಹಿನ್ನೆಲೆಯಲ್ಲಿ ಪ್ರತಾಪ್ ಕುಮಾರ್ ಅವರು ಸಿಐಡಿಗೂ ದೂರು ಸಲ್ಲಿಸಿದ್ದರ.
​
ದೂರಿನ ಬೆನ್ನಲ್ಲೇ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಡಿವೈಎಸ್ಪಿ ಹಾಗೂ ಸಿಬ್ಬಂದಿ ಚಿಂತಾಮಣಿ ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ,ದೂರುದಾರ ಪ್ರತಾಪ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಮಹಜರು ಪ್ರಕ್ರಿಯೆ ನಡೆಸಿದರು.ತದನಂತರ ಆರೋಪ ಕೇಳಿಬಂದಿರುವ ವಿವಿಧ ವಿಎಸ್‌ಎಸ್‌ಎನ್ ಸೊಸೈಟಿಗಳ ಕಾರ್ಯದರ್ಶಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ತಳಗವಾರ ಪ್ರತಾಪ್ ಕುಮಾರ್,ಮಾಜಿ ಸಿಎಂ ಕುಮಾರಸ್ವಾಮಿ ಅವರ ಅವಧಿಯಲ್ಲಿ ಸಾಲಮನ್ನಾ ಆದ ಯೋಜನೆಯಲ್ಲಿ ಕೇವಲ ಶೇ.20 ರಿಂದ 25 ರಷ್ಟು ಮಾತ್ರ ಅಸಲಿ ರೈತರಿದ್ದಾರೆ ಉಳಿದಂತೆ ನಕಲಿ ರೈತರ ಪಟ್ಟಿ ಸಿದ್ಧಪಡಿಸಿ ಸರ್ಕಾರದಿಂದ ಸಾಲಮನ್ನಾ ಹಣವನ್ನು ಕ್ಲೈಮ್ ಮಾಡಿಕೊಳ್ಳಲಾಗಿದೆ.ಈ ಹಣವನ್ನು ನಿಯಮ ಬಾಹಿರವಾಗಿ ಗ್ರಾಮೀಣ ಭಾಗದ ವಿವಿಧ ವಿಎಸ್‌ಎಸ್‌ಎನ್ ಸಂಘಗಳ ಮೂಲಕ ನೇರವಾಗಿ ನಗದಾಗಿ ಹಿಂಪಡೆಯಲಾಗಿದೆ,ಇದು ಆರ್‌ಬಿಐ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ, ವ್ಯವಸ್ಥೆ ಪರಿಶೀಲನೆ – ಈ ದಿನ.ಕಾಮ್

​ಮುಂದುವರಿದು ಮಾತನಾಡಿದ ಅವರು ಸದ್ಯ 11 ಕೋಟಿ ರೂ. ಮೊತ್ತಕ್ಕೆ ತನಿಖೆ ನಡೆಯುತ್ತಿದೆಯಾದರೂ ಇಡೀ ತಾಲೂಕಿನಲ್ಲಿ ತನಿಖೆ ವಿಸ್ತರಿಸಿದರೆ ನಕಲಿ ಮಹಿಳಾ ಸಹಕಾರ ಸಂಘಗಳು ಹಾಗೂ ಬೇನಾಮಿ ಸೊಸೈಟಿಗಳ ಹೆಸರಿನಲ್ಲಿ 100 ಕೋಟಿಗೂ ಅಧಿಕ ಅವ್ಯವಹಾರ ನಡೆದಿರುವುದು ಬೆಳಕಿಗೆ ಬರಲಿದೆ.ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿ,ನಿರ್ವಹಣಾಧಿಕಾರಿಗಳು,ಮ್ಯಾನೇಜರ್ ಹಾಗೂ ಸಿಬ್ಬಂದಿ ಈ ಇಡೀ ಅಕ್ರಮದಲ್ಲಿ ಭಾಗಿಯಾಗಿದ್ದಾರೆ.ರೈತರ ಹಾಗೂ ಬಡವರ ಹಣ ಲೂಟಿ ಮಾಡಿದವರಿಗೆ ಕಾನೂನು ರೀತಿ ಕಠಿಣ ಶಿಕ್ಷೆಯಾಗಬೇಕು,ಈ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸವಿದೆ” ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...