ಚಿಂತಾಮಣಿ | ಶಿಕ್ಷಕರ ಸಮಸ್ಯೆ ಪರಿಹರಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ

Date:

ಇಂದು ಚಿಂತಾಮಣಿ ನಗರದ ಎಂ ಸಿ ಆಂಜನೇಯ ರೆಡ್ಡಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಿಕ್ಷಕರ ಬೇಡಿಕೆ ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಸೆ.4ರಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದು,ಈ ಬಗ್ಗೆ ಸರ್ಕಾರದ ಕಾರ್ಯಾದೇಶ ಹೊರಡಿಸಿ ಸುಮಾರು 1,12,467 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಲು ಕ್ರಮವಹಿಸಬೇಕು. ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆನ್‌ಲೈನ್ ಕಾರ್ಯಗಳು ಮಾಡಲು ಸಮಸ್ಯೆಯಾಗುತ್ತಿದ್ದು, ಕ್ಲಸ್ಟರ್ ಹಂತದಲ್ಲಿ ದ್ವಿತೀಯ ದರ್ಜೆ ಸಹಾಯಕರನ್ನು ನೇಮಿಸಿ ಆನ್‌ಲೈನ್ ಕೆಲಸ ಕಾರ್ಯಗಳನ್ನು ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ಕೆಲವು ಜಿಲ್ಲೆಗಳಲ್ಲಿ ಮೊಟ್ಟೆ ಖರೀದಿ ಮತ್ತು ಸರಬರಾಜು ಮಾಡುವುದಕ್ಕೆ ಜಿಲ್ಲಾಡಳಿತದ ವತಿಯಿಂದ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸದರಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮುಖ್ಯ ಶಿಕ್ಷಕರಿಗೆ ಕಷ್ಟಕರವಾಗಿದ್ದು, ಏಜೆನ್ಸಿ ಮುಖಾಂತರ ಶಾಲೆಗಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡುವಂತೆ ಜಿಲ್ಲಾಡಳಿತದ ಕಡೆಯಿಂದ ವ್ಯವಸ್ಥೆ ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಚಿಂತಾಮಣಿ | ವಿಶೇಷ ಪ್ಯಾಕೇಜ್‌ಗಾಗಿ ಯರಕೋಟೆ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಅಶೋಕ್ ಕುಮಾರ್, ಜಿಲ್ಲಾಧ್ಯಕ್ಷ ಎ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಸುನಿಲ್, ಆಂಜನೇಯಪ್ಪ, ಜಗದೀಶ್, ವಸಂತ್ ರೆಡ್ಡಿ, ಆರ್ ಮಂಜುನಾಥ್, ಪ್ರಕಾಶ್ ರೆಡ್ಡಿ, ಗಂಗುಲಪ್ಪ, ವೆಂಕಟಾಚಲಪತಿ, ವಿ ರಮೇಶ್, ಮಾಸ್ತನ್ ವಲಿ, ಬಿ ಆಂಜನೇಯ ರೆಡ್ಡಿ, ಮಂಜುನಾಥ್, ಶಂಕರ್ ರೆಡ್ಡಿ, ಕೆಎಂ ಶಿವಪ್ರಸಾದ್, ಎಸ್ ವೆಂಕಟರತ್ನಮ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...