ಚಿಂತಾಮಣಿ | ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಅಶೋಕ್ ರೆಡ್ಡಿ ಚಾಲನೆ

Date:

ನೂತನ ಕ್ರೀಡಾ ನಿಯಮಗಳಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲು ತೊಂದರೆಯಾಗುತ್ತಿದ್ದು, ಹಳೇ ಕ್ರೀಡಾ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಒತ್ತಾಯಿಸಿದರು.

- Advertisement -

ಚಿಂತಾಮಣಿ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಗಳನ್ನು ಗುಂಡು ಎಸೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು “14 ವರ್ಷ ಮತ್ತು 17 ವರ್ಷ ಒಳಪಟ್ಟ ವಯೋಮಾನದ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳಾಗಿ ಮಾಡಿರುವುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾರ್ಥಿಗಳೊಂದಿಗೆ ಭಾಗವಹಿಸುವುದು ಕಷ್ಟಕರ. ಆದುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕ್ರೀಡೆಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿಂದೆ ನಡೆಸುತ್ತಿದ್ದಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಗಳೆಂದು ಪ್ರತ್ಯೇಕವಾಗಿ ನಡೆಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಉಲ್ಲಾಸ ಉತ್ಸಾಹ, ಆರೋಗ್ಯವಂತರಾಗಿರಬಹುದು. ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬಹುದು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳು, ಪ್ರತಿಭಾ ಕಾರಂಜಿಗಳು, ಕಲಿಕಾ ಹಬ್ಬಗಳು, ಕಲಿಕೋತ್ಸವಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲು ಸಹಕಾರಿಯಾಗುತ್ತವೆ” ಎಂದು ಆಶಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನಿರಂತರ ಮಳೆ: ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

“ಕಸಬಾ ಹೋಬಳಿ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಹೆಸರು ತರಬೇಕು” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನರಸಿಂಹಪ್ಪ, ಕ್ರೀಡಾಕೂಟದ ಉಸ್ತುವಾರಿಗಳಾದ ದೈಹಿಕ ಶಿಕ್ಷಕ ಉಪೇಂದ್ರ, ನಗರ ಸಿಆರ್‌ಪಿ ಬಾಸ್ಕರ್ ರೆಡ್ಡಿ, ಬೂರಗಮಾಕಲ ಹಳ್ಳಿ ಸಿಆರ್‌ಪಿ ನಾಗರಾಜ್, ನಗರ ಸೆಕೆಂಡ್ ಸಿಆರ್‌ಪಿ ಲಕ್ಷ್ಮಣ್ ರೆಡ್ಡಿ, ಆನೂರು ಸಿಆರ್‌ಪಿ ಮೆನಸಪ್ಪ, ದೈಹಿಕ ಶಿಕ್ಷಕರು ಹಾಗೂ ವಿದ್ಯಾರ್ಥಿ ಕ್ರೀಡಾಪಟುಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...