ಚಿಂತಾಮಣಿ | ನಗರಸಭಾ ಸದಸ್ಯನ ಕೊಲೆಗೆ ಯತ್ನ: ಆರೋಪಿಯ ಬಂಧನ

Date:

ಹಳೆಯ ದ್ವೇಷ ಇಟ್ಟುಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭಾ ಸದಸ್ಯನ ಕೊಲೆಗೆ ಯತ್ನ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಚಿಂತಾಮಣಿ ನಗರದ ವಾರ್ಡ್ ಸಂಖ್ಯೆ 3ರ ನಗರಸಭಾ ಸದಸ್ಯ ಸಿ ಕೆ ಶಬ್ಬೀರ್ ಅವರೊಂದಿಗೆ ಹಣ ಕೇಳುವ ವಿಚಾರಕ್ಕೆ ಮಾತುಕತೆ ನಡೆದಿದ್ದು, ಈ ವೇಳೆ ಡ್ರಾಗರ್‌ನಿಂದ ಕೊಲೆ ಮಾಡಲು ಯತ್ನಿಸಲಾಗಿದೆ. ಘಟನೆಯು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟಗಿರಿಕೋಟೆಯಲ್ಲಿ ಬುಧವಾರ ರಾತ್ರಿ 8ರ ಸುಮಾರಿಗೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಆರೋಪಿ ಮನ್ಸೂರ್ ಅಲಿಯಾಸ್ ಚೋಟು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರಸಭಾ ಸದಸ್ಯ ಸಿ ಕೆ ಶಬ್ಬೀರ್ ರಾತ್ರಿ ಸುಮಾರು 8ರ ವೇಳೆಗೆ ಅದೇ ವಾರ್ಡಿನ ವಾಸಿಯಾದ ಮನ್ಸೂರ್ ಅಲಿಯಾಸ್ ಚೋಟು, ನಗರಸಭಾ ಸದಸ್ಯನ ಬಳಿ ಬಂದು 100/-ರೂ ಹಣ ಕೊಡು ಎಂದು ಕೇಳಿದ್ದಾರೆ. ಈ ವೇಳೆ ಶಬ್ಬೀರ್ ಅವರು ತನ್ನ ಮಗನಾದ ಜಾಬೀರ್ ಅವರ ಬಳಿ ಹೋಗಿ ತೆಗೆದುಕೋ ಎಂತ ಹೇಳಿದ್ದರು. ಅದಕ್ಕೆ ಉತ್ತರಿಸಿದ್ದ ಆರೋಪಿ ಮನ್ಸೂರ್, ನಿಮ್ಮ ಜಾಬೀರ್ ಯಾರ ಜೊತೆಯಲ್ಲಿಯೋ ಮಾತನಾಡುತ್ತಿದ್ದಾನೆ ಎಂದು ಉತ್ತರಿಸಿದ್ದಾನೆ. ಇದೇ ವೇಳೆ ವಾಗ್ವಾದ ನಡೆದಾಗ, ತನ್ನ ಬೆನ್ನಿನ ಹಿಂದೆ ಇಟ್ಟುಕೊಂಡಿದ್ದ ಒಂದು ಡ್ರಾಗರ್ ತರಹದ ದೊಡ್ಡ ಚಾಕುವನ್ನು ಏಕಾಏಕಿ ತೆಗೆದು ತಿವಿಯಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಬಂದು ನಗರಸಭಾ ಸದಸ್ಯನನ್ನು ಬಚಾವ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಬಸ್‌ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಈ ಘಟನೆಯ ವಿಷಯ ತಿಳಿದ ತಕ್ಷಣ ನಗರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ವಿಜಿ ಕುಮಾರ್ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಮನ್ಸೂರ್‌ನನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...