ದ್ಚಿಚಕ್ರವಾಹನ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ನಿನ್ನೆ ರಾತ್ರಿ ನಡೆದಿದೆ.
ಚಿಂತಾಮಣಿ ನಗರದ ವೆಂಕಟಗಿರಿ ಕೋಟೆಯಲ್ಲಿ ವಾಸವಾಗಿರುವ ಪ್ರಭಾಕರ ಆಚಾರಿ, ಹಾಗೂ ಪಲ್ಲಿಗಡ್ಡ ಗ್ರಾಮದ ವೆಂಕಟರವಣಪ್ಪ ಮೃತ ದುರ್ದೈವಿಗಳು.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಚೇಳೂರು ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ವೇಳೆ ಚಾಲಕನ ಹಿಡಿತ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ನಂತರ ಗುಣಿಗೆ ಬಿದ್ದಿದೆ. ಬಿದ್ದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಚಿಂತಾಮಣಿ | ಬ್ಯಾಂಕ್‌ಗಳಲ್ಲಿ ಗೃಹಲಕ್ಷ್ಮಿ ಹಣಕ್ಕೆ ಕತ್ತರಿ; ರೈತ ಸಂಘದಿಂದ ಘೇರಾವು ಎಚ್ಚರಿಕೆ