ಡಿವೈಡರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮದನಪಲ್ಲಿ ಹೈವೇ ರಸ್ತೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಬೈಕೊಂಡದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದ ಬೆಂಗಳೂರು ಚಿಕ್ಕಜಾಲ ಮೂಲದವರಾದ ಅನಂತ್ ಕುಮಾರ, ವೆಂಕಟೇಶ್, ಲಕ್ಷ್ಮಿಕಾಂತ್, ರಾಮ ಚಂದ್ರ, ಅಂಬರೀಷ್, ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಮಸ್ಕಲ್ ಸರ್ಕಾರಿ ಶಾಲೆಯ ಮಕ್ಕಳಿಗೆ ಅವಿರತ ಟ್ರಸ್ಟ್‌ನಿಂದ ಉಚಿತ ನೋಟ್ ಬುಕ್ ವಿತರಣೆ
ಗಾಯಾಳುಗಳನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಕೊಂಡಿದ್ದಾರೆ.