ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿಯಾಗಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಿಟ್ಟಹಳ್ಳಿ ಗ್ರಾಮದ ಮಾಜಿ ಅಧ್ಯಕ್ಷ ನರಸಿಂಹರೆಡ್ಡಿ(58 ವರ್ಷ) ಎಂದು ಗುರುತಿಸಲಾಗಿದೆ.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನರಸಿಂಹ ರೆಡ್ಡಿಯವರು ಚಿಂತಾಮಣಿ ಕಡೆಯಿಂದ ಮಿಟ್ಟಹಳ್ಳಿ ಕಡೆ ಹೋಗುತ್ತಿದ್ದ ವೇಳೆ ಗೌನೇನಹಳ್ಳಿ ಕಡೆ ಹೋಗಲು ಎದುರಿನಿಂದ ಅತಿ ವೇಗವಾಗಿ ಬಂದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ನರಸಿಂಹರೆಡ್ಡಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ರೈತರು ಆತ್ಮಹತ್ಯೆಗೆ ಮುಂದಾಗಬಾರದು: ಸಚಿವ ಸಂತೋಷ್ ಲಾಡ್
ಘಟನೆಯ ವಿಷಯ ತಿಳಿದ ಕೂಡಲೇ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.