ಚಿಂತಾಮಣಿ |ನಿಯಮ ಬಾಹಿರ ಮಳಿಗೆಗಳ ಬಳಕೆ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಪ್ರಭು.

Date:

ನಗರದ ಹಳೆಯ ಐಡಿಎಸ್ಎಂಟಿ ಮಾರುಕಟ್ಟೆಯ ಮಳಿಗೆಗಳ ತೆರವು ಹಾಗೂ ಪುನರ್ನಿರ್ಮಾಣದ ಕುರಿತಂತೆ ಉದ್ಭವಿಸಿರುವ ಗೊಂದಲಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ನಗರಸಭೆ ಕಾರ್ಯಾಲಯದಲ್ಲಿ ವ್ಯಾಪಾರಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು.

- Advertisement -

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,ಮಾರುಕಟ್ಟೆಯ ಅಭಿವೃದ್ಧಿ ದೃಷ್ಟಿಯಿಂದ ಹಳೆಯ ಮಳಿಗೆಗಳನ್ನು ತೆರವುಗೊಳಿಸಿ ಸುಸಜ್ಜಿತ ಸಂಕೀರ್ಣ ನಿರ್ಮಿಸುವ ಸರ್ಕಾರದ ಯೋಜನೆಯ ಬಗ್ಗೆ ವಿವರಿಸಿದರು.ಮಳಿಗೆಗಳನ್ನು ನಂಬಿಕೊಂಡಿರುವ ವ್ಯಾಪಾರಸ್ಥರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಧಿಕೃತವಾಗಿ ಮಳಿಗೆಗಳನ್ನು ಹೊಂದಿರುವ ಮತ್ತು ಬಾಡಿಗೆ ಪಾವತಿಸುತ್ತಿರುವ ವ್ಯಾಪಾರಸ್ಥರ ಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ. ಅರ್ಹ ವ್ಯಾಪಾರಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಐಡಿಎಸ್ಎಂಟಿ ಮಾರುಕಟ್ಟೆಯ ಅಭಿವೃದ್ಧಿ ನಗರದ ಬೆಳವಣಿಗೆಗೆ ಪೂರಕವಾಗಿದೆ.ವ್ಯಾಪಾರಸ್ಥರು ಆತಂಕ ಪಡುವ ಅಗತ್ಯವಿಲ್ಲ.ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು.ನಗರಸಭೆಯ ಅಧಿಕಾರಿಗಳಿಗೆ ಬಾಕಿ ಇರುವ ಬಾಡಿಗೆ ವಸೂಲಿ ಮತ್ತು ದಾಖಲೆಗಳ ಸಮರ್ಪಕ ನಿರ್ವಹಣೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಾರುಕಟ್ಟೆ ಸಂಕೀರ್ಣದಲ್ಲಿ ಸ್ವಚ್ಛತೆ,ನೀರು ಮತ್ತು ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದ ಅವರು ಮಳಿಗೆಗಳ ವಿಚಾರದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ಪಾರದರ್ಶಕವಾಗಿ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಮಾರುಕಟ್ಟೆಯ ಮಳಿಗೆಗಳ ಬಾಡಿಗೆ ಪಾವತಿ,ಹಂಚಿಕೆ ಪ್ರಕ್ರಿಯೆ ಮತ್ತು ಮೂಲಸೌಕರ್ಯಗಳ ಬಗ್ಗೆ ವ್ಯಾಪಾರಸ್ಥರ ಅಹವಾಲುಗಳನ್ನು ಆಲಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

ಈ ಸಂದರ್ಭದಲ್ಲಿ ಪೌರಾಯುಕ್ತರಾದ ಜಿ ಎನ್ ಚಲಪತಿ,ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್,ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...