ಚಿಂತಾಮಣಿ | ಕೆಐಎಡಿಬಿ ಪರ ರೈತರ ರಣಕಹಳೆ: ಜೂನ್ 4 ರಿಂದ ಬೀದಿಗಿಳಿಯಲಿರುವ ಅನ್ನದಾತರು!

Date:

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ ಕೆಐಎಡಿಬಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಬೆಂಬಲಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜೂನ್ 4 ರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷರಾದ ಕದಿರೇಗೌಡ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ,ಬಿಎ ಪ್ರತಿಶ್ ಹೇಳಿದರು.

ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು ಜೂನ್ 4 ರಿಂದ ಪಂಜಿನ ಮೆರವಣಿಗೆ,ಜೂನ್ 5 ರಿಂದ ಉಪವಾಸ ಸತ್ಯಾಗ್ರಹ ​ರೈತರ ಹಕ್ಕುಗಳಿಗಾಗಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ ಅವರು ಜೂನ್ 5 ರಂದು 13 ಹಳ್ಳಿಗಳ ರೈತರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭವಾಗಲಿದೆ. ಈ ಹೋರಾಟಕ್ಕೆ ತಾಲ್ಲೂಕಿನ ಎಲ್ಲಾ ಪಕ್ಷಾತೀತ,ಜಾತೀತ,ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು ಮತ್ತು ರೈತ ಬಾಂಧವರು ಬೆಂಬಲ ನೀಡಿ ಭಾಗವಹಿಸಬೇಕಾಗಿ ಕೋರಿದರು. ಶಿಡ್ಲಘಟ್ಟ ತಾಲ್ಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು,ಇಲ್ಲಿ ಯಾವುದೇ ನದಿ-ನಾಲೆಗಳ ಆಶ್ರಯವಿಲ್ಲದೆ ಬರದ ಭೂಮಿಯಾಗಿದೆ.

ಇಂತಹ ಸಂದರ್ಭದಲ್ಲಿ ಜಂಗಮಕೋಟೆ ಹೋಬಳಿಯ ಬಸವಪಟ್ಟಣ,ತಾದೂರು,ನಡುಪಿನಾಯಕನಹಳ್ಳಿ, ಯಣ್ಣಂಗೂರು,ಹೊಸಪೇಟೆ,ಚೊಕ್ಕಂಡಹಳ್ಳಿ, ಗೂಲಹಳ್ಳಿ,ದೇವಗಾನಹಳ್ಳಿ,ಅರಿಕರೆ,ಸಂಜೀವಪುರ, ಕೋಲಮಿಹೊಸೂರು,ಎದ್ದಲತಿಪ್ಪೇನಹಳ್ಳಿ, ತೊಟ್ಟಗಾನಹಳ್ಳಿ ಸೇರಿದಂತೆ 13 ಹಳ್ಳಿಗಳ ವ್ಯಾಪ್ತಿಯಲ್ಲಿ 2823 ಎಕರೆ ಭೂಮಿಯನ್ನು ಕೆಐಎಡಿಬಿ ಮೂಲಕ ಭೂಸ್ವಾಧೀನಕ್ಕೆ ಸರ್ಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ​ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 552 ಎಕರೆ ಭೂಸ್ವಾಧೀನದ ಆದೇಶವನ್ನು ಕೈಬಿಟ್ಟಿದ್ದು,ಉಳಿದ 2271 ಎಕರೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಆದರೆ,ಸರ್ಕಾರ ಕೈಬಿಟ್ಟಿರುವ 552 ಎಕರೆ ಜಮೀನಿನ ಮಾಲೀಕರೇ ಹೋರಾಟದ ಮುಂಚೂಣಿಯಲ್ಲಿದ್ದು,ಉಳಿದ ರೈತರ ಜಮೀನನ್ನು ಏಕೆ ಬಿಟ್ಟಿಲ್ಲ ಎಂಬುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೃಷಿ ಭೂಮಿಯ ಹೆಸರಿನಲ್ಲಿ ಈ ಹಿಂದೆ ಬೇರೆಡೆ ನೂರಾರು ಎಕರೆ ಭೂಪರಿವರ್ತನೆ(ಲೇಔಟ್)ಆಗಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ.ಕಳೆದ 75 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಈವರೆಗೂ ರೈತರ ಅಹವಾಲು ಆಲಿಸಿಲ್ಲ ಎಂದು ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗ ಈ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮುಂದುವರಿಯಲಿದ್ದು,ನ್ಯಾಯ ಸಿಗುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಮಾದಕ ವಸ್ತುಗಳ ಪಿಡುಗನ್ನು ನಿಲ್ಲಿಸಿ ಯುವಕರನ್ನು ರಕ್ಷಸಿ, ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕೋಲಾರ ಯುವಕರಿಂದ ಒತ್ತಾಯ.

ಪತ್ರಿಕಾಗೊಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಹುಸೇನ್ ಸಾಬಿ, ನಾಗರಾಜು,ಶ್ರೀರಾಮಪ್ಪ,ನಾರಾಯಣಸ್ವಾಮಿ,ರಮೇಶ್,ಪ್ರಭುಗೌಡ,ಈರಪ್ಪ,ನಾಗಣ್ಣ,ಬೈರೆಡ್ಡಿ,ಶ್ರೀನಿವಾಸ್ ರೆಡ್ಡಿ,ನರಸಿಂಹಪ್ಪ,ಅಸ್ಲಾಂ ಪಾಷಾ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...