ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

Date:

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ ಎಂದು ಆರೋಪಿಸಿ,ನವೆಂಬರ್ 30ರ ಸೋಮವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ರೈತ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ (ಕರ್ನಾಟಕ ಪ್ರದೇಶ) ಜಿಲ್ಲಾ ಉಪಾಧ್ಯಕ್ಷರಾದ ವೆಂಕಟರೆಡ್ಡಿ ಎನ್,ಚಿಂತಾಮಣಿ ತಾಲೂಕು ಅಧ್ಯಕ್ಷ ಪಿ ಎನ್ ಕೃಷ್ಣಪ್ಪ ಜಿಲ್ಲಾ ಸದಸ್ಯರಾದ ಅಪ್ಪಾಜಿರೆಡ್ಡಿ,ತಿಳಿಸಿದ್ದಾರೆ.

- Advertisement -

​ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ ಐದು ವರ್ಷಗಳಿಂದ ಸಂಘಟನೆಯು ನಿರಂತರವಾಗಿ ರೈತರ ಧ್ವನಿಯಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ. ಮುಂಬರುವ ಫ್ರೀಡಂ ಪಾರ್ಕ್ ರ‍್ಯಾಲಿಯಲ್ಲಿ ರಾಜ್ಯಾದ್ಯಂತ ಸುಮಾರು 20,000 ರಿಂದ 30,000 ರೈತರು ಸೇರುವ ನಿರೀಕ್ಷೆಯಿದ್ದು,ಚಿಂತಾಮಣಿ ತಾಲೂಕಿನಿಂದಲೂ ಕನಿಷ್ಠ ಒಂದು-ಎರಡು ಬಸ್‌ಗಳಲ್ಲಿ ರೈತರು ತೆರಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

ಅನ್ನದಾತ ಸಂಕಷ್ಟದಲ್ಲಿದ್ದರೂ ಉಭಯ ಸರ್ಕಾರಗಳು ಸ್ಪಂದಿಸುತ್ತಿಲ್ಲ.ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಧರಣಿಯ ವೇಳೆ ಅಧಿಕಾರಿಗಳು ಸಕಾಲಕ್ಕೆ ಬಾರದಿದ್ದರೂ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಲಾಗಿದೆ. ಹಾಲಿನ ದರವನ್ನು ಕೇವಲ ₹2 ಹೆಚ್ಚಿಸಿರುವುದು ಅವೈಜ್ಞಾನಿಕ. ಹೊರರಾಜ್ಯಗಳಲ್ಲಿ ಪ್ರತಿ ಲೀಟರ್ ಹಾಲಿಗೆ ₹60 ರಿಂದ ₹100 ವರೆಗೆ ದರವಿದ್ದರೆ,ನಮ್ಮಲ್ಲಿ ₹42–₹43 ನೀಡುತ್ತಿರುವುದರಿಂದ ಹೈನುಗಾರರಿಗೆ ನಷ್ಟವಾಗುತ್ತಿದೆ.ಪಶು ಆಹಾರ ಸೇರಿದಂತೆ ಎಲ್ಲಾ ಕಚ್ಚಾ ವಸ್ತುಗಳ ಬೆಲೆ ಗಗನಕ್ಕೇರಿದೆ.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಂದ ವಿಮಾ ಕಂತು ಕಟ್ಟಿಸಿಕೊಂಡಿದ್ದರೂ ಇದುವರೆಗೂ ಪರಿಹಾರ ಬಿಡುಗಡೆಯಾಗಿಲ್ಲ.ಬರಗಾಲ ಘೋಷಣೆಯಾಗಿ ಮೂರ್ನಾಲ್ಕು ತಿಂಗಳು ಕಳೆದರೂ ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ದೊರೆತಿಲ್ಲ.ಒಂದು ಎಕರೆ ಭೂಮಿಯ ಉಳುಮೆ ಮತ್ತು ಬಿತ್ತನೆಗೆ ₹4,000 ರಿಂದ ₹5,000 ವೆಚ್ಚ ತಗುಲುತ್ತಿದೆ.ಮಳೆಯ ಕೊರತೆಯಿಂದ ಭೂಮಿಯಲ್ಲಿ ತೇವಾಂಶವಿಲ್ಲದಂತಾಗಿದ್ದು,ಬೆಳೆ ನಷ್ಟವಾದರೆ ರೈತ ಚೇತರಿಸಿಕೊಳ್ಳಲು ಹಲವು ವರ್ಷಗಳೇ ಬೇಕಾಗುತ್ತದೆ.
​ಸರ್ಕಾರ ಕೂಡಲೇ ಬರ ಪರಿಹಾರವನ್ನು ಬಿಡುಗಡೆ ಮಾಡಿ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು;ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪದ ಹೋರಾಟ ಮತ್ತು ಮುಷ್ಕರ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್

ಪತ್ರಿಕಾಗೋಷ್ಠಿಯಲ್ಲಿ ನಾರಾಯಣಸ್ವಾಮಿ,ಪ್ರಕಾಶ್,ಮುರಳಿ,ಆರ್ ಡಿ ನರಸಿಂಹಯ್ಯ,ಮುನಿಶಮಿರೆಡ್ಡಿ,ಪಿ ವಿ ನಾರಾಯಣಸ್ವಾಮಿ, ಶಿವಪ್ಪ,ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...