ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ.
ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ ಲಕ್ಷ್ಮಿದೇವಮ್ಮ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸ್ಪೋಟಗೊಂಡು ಮನೆಯ ಮೇಲ್ಚಾವಣಿ ಹಾನಿಯಾಗಿ ಮನೆಯಲ್ಲಿದ್ದ ತಾಯಿ ಲಕ್ಷ್ಮಿದೇವಿ(32 ವರ್ಷ)ಮಗ ಹರ್ಷವರ್ಧನ್(14ವರ್ಷ) ಸಂಜಯ್(13 ವರ್ಷ) ಹರಿಪ್ರಿಯ(11 ವರ್ಷ) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಯಿ ಲಕ್ಷ್ಮಿದೇವಿ ಹಾಗೂ ಮಗ ಹರ್ಷವರ್ಧನ್ ರವರ ಸ್ಥಿತಿ ಚಿಂತ ಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗೊತ್ತಾಗಿದೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಗಣಿಬಾಧಿತ ವಲಯ ಪ್ರದೇಶಗಳ ಮಣ್ಣು, ನೀರಿನ ಸಂರಕ್ಷಣೆ ಅಗತ್ಯ: ಉಪ ಕೃಷಿನಿರ್ದೇಶಕ ಮಂಜುನಾಥ್
ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡ ಇಬ್ಬರು ಮಕ್ಕಳು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ಯಾಸ್ ಸಿಲೆಂಡರ್ ಸ್ಫೋಟದ ರಭಸಕ್ಕೆ ಮನೆಯ ಗೃಹಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಯ ವಿಷಯ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.