ಚಿಂತಾಮಣಿ | ವಿಶೇಷ ಪ್ಯಾಕೇಜ್‌ಗಾಗಿ ಯರಕೋಟೆ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಯರಕೋಟೆ ಗ್ರಾಮದಿಂದ ಬೆಂಗಳೂರು ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ಆರಂಭಿಸಲಾಗಿದೆ.

ಯರಕೋಟೆ ಗ್ರಾಮದ ಮಂಜುನಾಥ್ ವೈ ಎನ್ ಎಂಬುವರು ತಮ್ಮ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ ಬೆಳೆಸಿದ್ದಾರೆ. ಇಂದು ಗ್ರಾಮದ ಶ್ರೀ ಗಂಗಮ್ಮ ದೇವಸ್ಥಾನದಿಂದ ನಾಲ್ಕು ದಿನಗಳ ಕಾಲ್ನಡಿಗೆ ಜನಜಾಥಾ ಮತ್ತು ರಥಯಾತ್ರೆ ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಯರಕೋಟೆ ಗ್ರಾಮದ ಬಗ್ಗೆ ಹಿರಿಯರಾದ ನೀರಗಂಟಿ ಚಿಂತಪ್ಪನವರು ಹೇಳಿದ ಕಥೆಗಳಿಂದ ಪ್ರೇರಿತಗೊಂಡು 32 ವರ್ಷಗಳ ಕಾಲ ಒಂದು ಗ್ರಾಮದ ಅಭಿವೃದ್ಧಿಯ ಬಗ್ಗೆ ಅಧ್ಯಯನ ಮಾಡಿ 156 ಗ್ರಾಮಗಳಿಗೆ ಸಂಚಾರ ಮಾಡಿದ್ದೇನೆ. ಯಾವುದೇ ರಾಜಕೀಯ ಅಧಿಕಾರವಿಲ್ಲದೇ ಸತತವಾಗಿ 32 ವರ್ಷಗಳಿಂದ ಯರಕೋಟೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಇದನ್ನು ಮುಂದುವರೆಸಲು ಸರ್ಕಾರಗಳು ಸಹಕಾರ ನೀಡಬೇಕು”

ಸಾಕಷ್ಟು ಕಾರ್ಯಕ್ರಮಗಳ ಅನುಭವದಿಂದ 50 ವರ್ಷಗಳಲ್ಲಿ ಕಾಣದೇ ಇರುವ ಗ್ರಾಮದ ಅಭಿವೃದ್ಧಿ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಮಾಡಲು ಸಿದ್ಧನಿದ್ದೇನೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯಕ್ಕೆ ಮಾದರಿಯಾಗಿ ಅಭಿವೃದ್ಧಿ ಮಾಡಲು ಒತ್ತಾಯಿಸಿ ಈಗಾಗಲೇ 2014 ರಿಂದ 2025 ರವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಲವಾರು ಮನವಿ ಪತ್ರಗಳನ್ನು ನೀಡಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಯರಕೋಟೆ ಗಂಗಮ್ಮ ದೇವಸ್ಥಾನಕ್ಕೆ ಇಡೀ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ಮತ್ತಿತರ ರಾಜ್ಯಗಳಿಂದ ಸಾವಿರಾರು ಭಕ್ತಾಧಿಗಳಿಗೆ ಭೇಟಿ ನೀಡುತ್ತಾರೆ. ಇದಕ್ಕಾಗಿ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

ಯರಕೋಟೆ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆ ಪ್ರಾರಂಭವಾದಾಗಿನಿಂದ ಲಕ್ಷಾಂತರ ಹಣ ಲೂಟಿಯಾಗುತ್ತಿದ್ದು, ಇದರ ಸಂಪೂರ್ಣ ತನಿಖೆಯಾಗಬೇಕು. ಗ್ರಾಮಸ್ಥರು ವಲಸೆ ಹೋಗುವುದನ್ನು ತಡೆಗಟ್ಟಿ, ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿ ಕೆಲಸಗಳಿಗೆ ಅವಕಾಶ ಮಾಡಿಕೊಡಬೇಕು. ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮವಾಗಿ ಬಿಲ್ಲುಗಳನ್ನು ಮಾಡುತ್ತಿದ್ದಾರೆ. ಇದನ್ನು ಪರಿಶೀಲಿಸಿ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ಕೆಲಸದಿಂದ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X