​ಚಿಂತಾಮಣಿ |ಚಿಂತಾಮಣಿಯಲ್ಲಿ ಭೀಕರ ರಕ್ತಪಾತ: ಕೌಟುಂಬಿಕ ಕಲಹಕ್ಕೆ ಪತ್ನಿ, ನಾದಿನಿಯನ್ನು ಕಟುಕನಂತೆ ಕೊಂದ ಪತಿ!

Date:

ಕೌಟುಂಬಿಕ ವಿರಸದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಮುಂಜಾನೆ ನಡೆದಿದೆ. ಕೋಲಾರ ಗಲ್ಪೇಟೆಯ ಮೂಲದ ನಿವಾಸಿ,30 ವರ್ಷದ ಏಜಾಜ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.ಘಟನೆಯಲ್ಲಿ ಆರೋಪಿಯ ಪತ್ನಿ ಶ್ಯಾಮ(25 ವರ್ಷ)ಹಾಗೂ ಆಕೆಯ ತಂಗಿ ರೇಷ್ಮಾ(18 ವರ್ಷ)ಕ್ರೂರವಾಗಿ ಹತ್ಯೆಗೊಳಗಾದ ದುರ್ದೈವಿಗಳಾಗಿದ್ದಾರೆ

- Advertisement -

ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಏಜಾಜ್ ಮತ್ತು ಮೃತ ಶ್ಯಾಮ ದಂಪತಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗುವಿದೆ ಕಳೆದ ಮೂರು-ನಾಲ್ಕು ತಿಂಗಳುಗಳಿಂದ ದಂಪತಿಗಳ ನಡುವೆ ತೀವ್ರ ಸ್ವರೂಪದ ಕೌಟುಂಬಿಕ ಕಲಹಗಳು ನಡೆಯುತ್ತಿದ್ದವು.ಇದೇ ವಿರಸದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಕೋಲಾರದಿಂದ ಚಿಂತಾಮಣಿಯಲ್ಲಿರುವ ಪತ್ನಿಯ ಮನೆಗೆ ಏಜಾಜ್ ಬಂದಿದ್ದನು. ರಾತ್ರಿಯೂ ಇಬ್ಬರ ನಡುವೆ ಗಲಾಟೆ ನಡೆದಿದ್ದು,ಸೋಮವಾರ ಮುಂಜಾನೆ 6 ಗಂಟೆಯ ಸುಮಾರಿಗೆ ಗಲಾಟೆ ವಿಕೋಪಕ್ಕೆ ತಿರುಗಿದೆ.ಇದರಿಂದ ಕೋಪೋದ್ರಿಕ್ತನಾದ ಏಜಾಜ್,ಪತ್ನಿ ಶಮ್ಮ ಹಾಗೂ ನಾದಿನಿ ರೇಷ್ಮಾ ಇಬ್ಬರನ್ನೂ ಭೀಕರವಾಗಿ ಹತ್ಯೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

​ಕೊಲೆ ಮಾಡಿ ಮಕ್ಕಳೊಂದಿಗೆ ಪರಾರಿ, ಬಳಿಕ ಪೊಲೀಸ್ ಠಾಣೆಗೆ ಶರಣು!

ಡಬಲ್ ಮರ್ಡರ್ ಮಾಡಿದ ಬಳಿಕ ಆರೋಪಿ ಏಜಾಜ್ ತನ್ನ ಮೂರು ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಕೋಲಾರಕ್ಕೆ ಪರಾರಿಯಾಗಿದ್ದನು.ಮಕ್ಕಳನ್ನು ಕೋಲಾರದ ತನ್ನ ಮನೆಯಲ್ಲಿ ಬಿಟ್ಟು, ತದನಂತರ ಕೋಲಾರದ ಗಲ್ಪೇಟೆ ಪೊಲೀಸ್ ಠಾಣೆಗೆ ತೆರಳಿ ತಾನೇ ಸ್ವತಃ ಶರಣಾಗಿದ್ದಾನೆ.ಆರೋಪಿ ಶರಣಾದ ವಿಷಯ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

​ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೈ ಸೇರಿದಂತೆ ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಠಾಣೆಯ ಹಲವು ಇನ್ಸ್ಪೆಕ್ಟರ್‌ಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ..? ಮುಳಬಾಗಿಲು| ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿ.ಎಲ್.ಓ ಗೆ ಮಾಹಿತಿ ನೀಡಿ ಸಹಿ ಮಾಡಿದ ಶಾಸಕ ಕೊತ್ತೂರು ಮಂಜುನಾಥ್ – ಈ ದಿನ.ಕಾಮ್

​ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.ಒಂದೇ ಮನೆಯಲ್ಲಿ ಇಬ್ಬರು ಯುವತಿಯರ ಭೀಕರ ಕೊಲೆಯಾಗಿರುವುದರಿಂದ ಜೆಜೆ ಕಾಲೋನಿಯ ನಿವಾಸಿಗಳಲ್ಲಿ ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....