ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಮುನಗನಹಳ್ಳಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ಮೂಲಕ ಕೆರೆಗಳ ಮೂಲ ಸ್ವರೂಪವನ್ನೇ ಹಾಳು ಮಾಡುತ್ತಿದ್ದಾರೆ. ಕೆರೆಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಸಿದ್ದಾರೆ.

ಚಿಂತಾಮಣಿ ತಾಲೂಕಿನ ಮುನಗನಹಳ್ಳಿ ಗ್ರಾಮದ ಕೆರೆ ಹಾಗೂ ಅಂಗಳದ ಅಕ್ಕಪಕ್ಕ ಹಾಡಹಗಲೇ ರಾಜಾರೋಷವಾಗಿ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಜೆಸಿಬಿ ಬಳಸಿ ತೋಟಗಳಿಗೆ ಅಕ್ರಮವಾಗಿ ಮಣ್ಣು ಸಾಗಣೆ ಮಾಡುತ್ತಿದ್ದಾರೆ. ಕೆರೆ ಕುಂಟೆ ಸರಿಯಾಗಿ ಇದ್ದರೆ ಮಾತ್ರ ಮಳೆ ನೀರು ಶೇಖರಣೆಯಾಗುತ್ತದೆ. ಇದರಿಂದಾಗಿ ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ. ಆದರೆ,ಕೆಲವು ಜನರು ಹಣದಾಸೆಗೆ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣುಗಾರಿಕೆ ಮಾಡುವ ಮೂಲಕ ಕೆರೆಗಳ ನಾಶಕ್ಕೆ ಮುಂದಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಬೇಸಿಗೆ ಕಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ನಿತ್ಯ ಜೆಸಿಬಿಯೊಂದಿಗೆ ಹತ್ತಾರು ಟ್ರ್ಯಾಕ್ಟರ್‌ ಬಳಸಿ ಮಣ್ಣು ತೆಗೆಯುವ ದಂಧೆ ಹೆಚ್ಚಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇರಿದಂತೆ ಇತರ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಕೆರೆಗಳಲ್ಲಿ ಇರುವ ಹೂಳು ತೆಗೆದು ಕೆರೆಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದರೆ ಮತ್ತೊಂದು ಕಡೆ ಕೆಲವರು ಅಕ್ರಮ ಮಣ್ಣುಗಾರಿಕೆಯಿಂದ ಹಣ ಸಂಪಾದಿಸಲು ಕೆರೆಗಳನ್ನು ಹಾಳು ಮಾಡಲು ಹೊರಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

WhatsApp Image 2025 07 07 at 10.14.26 AM

ಮಣ್ಣು ತೆಗೆಯುವವರು ವಾರದ ರಜಾ ದಿನಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಅಧಿಕಾರಿಗಳ ಭಯವಿಲ್ಲದೇ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದೆ. ಕಂದಾಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ,ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ರಜೆ ಇದ್ದರೆ ಸ್ಥಳಕ್ಕೆ ಬರುವುದಿಲ್ಲ ಎಂಬ ಮುಂದಾಲೋಚನೆಯಿಂದ ಮಣ್ಣು ಎತ್ತುವುದು ಎಗ್ಗಿಲ್ಲದೆ ನಡೆಯುತ್ತಿದೆ ಎಂಬುದು ಸಾರ್ವಜನಿಕರ ಆರೋಪ.

ಅಕ್ರಮ ದಂಧೆಯಲ್ಲಿ ತೊಡಗಿರುವವರನ್ನು ಸಾರ್ವಜನಿಕರು ತಡೆದು ಮಣ್ಣು ತೆಗೆಯುವವರನ್ನು ಪ್ರಶ್ನಿಸಿದರೆ ‘ನಾವು ಪರವಾನಗಿ ಪಡೆದಿದ್ದೇವೆ’ ಎಂದು ಸಬೂಬು ಹೇಳುವ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರ ಮೂಲಕ ಕೆರೆಗಳನ್ನು ಸಂರಕ್ಷಣೆ ಮಾಡಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸಂತ್ರಸ್ತ ಅಶ್ರಫ್ ಕುಟುಂಬಕ್ಕೆ ಯುಟಿ ಖಾದರ್, ಸಚಿವ ಜಮೀರ್‌ರಿಂದ ಪರಿಹಾರ ವಿತರಣೆ

ಮುನಗನಹಳ್ಳಿಯ ಕೆರೆ ಹಾಗೂ ಅಂಗಳದಲ್ಲಿ ಅಕ್ರಮವಾಗಿ ಜೆಸಿಬಿ ಮುಖಾಂತರ ಮಣ್ಣು ಎತ್ತುತ್ತಿದ್ದನ್ನು ಸೆರೆ ಹಿಡಿಯಲು ಮಾಧ್ಯಮದವರು ಹೋದ ನಂತರ ಜೆಸಿಬಿ ಹಾಗೂ ಟ್ರಾಕ್ ಅಲ್ಲಿಂದ ನಾಪತ್ತೆಯಾಗಿದೆ. ಇದರ ಮಾಹಿತಿ ಕೂಡಲೇ ತಾಲೂಕು ದಂಡಾಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಪಸ್ ಬಂದಿದ್ದಾರೆ.

WhatsApp Image 2025 07 07 at 10.14.26 AM 1

ಈ ಕುರಿತು ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ದೂರವಾಣಿ ಮುಖಾಂತರ ಸಂಪರ್ಕಿಸಿದಾಗ ಕೆರೆಯಲ್ಲಿ ಮಣ್ಣು ಎತ್ತಲು ಪಂಚಾಯತಿಯಿಂದ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಇನ್ನು ತಾಲೂಕು ದಂಡಾಧಿಕಾರಿಗಳು ಮಣ್ಣು ಎತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಸ್ಥಳೀಯ ಪಂಚಾಯಿತಿಗೆ ನೋಟಿಸ್ ನೀಡಿ ಮಣ್ಣು ಎತ್ತಿರುವವರಿಂದ ದಂಡ ವಸೂಲಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X