ಚಿಂತಾಮಣಿ |ಜ್ಞಾನದ ಕೇಂದ್ರಕ್ಕೆ ಬೀಗ ಹಾಕಿದ್ರೆ ಸುಮ್ಮನಿರಲ್ಲ!ಕೆಂಚರ್ಲಹಳ್ಳಿ ಪಿಡಿಓ ಅವರ ಈ ಅದ್ಭುತ ಕೆಲಸಕ್ಕೆ ಸಾರ್ವಜನಿಕರ ಶ್ಲಾಘನೆ.

Date:

ತಾಲ್ಲೂಕಿನ ಕೆಂಚರ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬಳಕೆಗೆ ಸಿಗದೆ,ಕಳೆದ ಕೆಲವು ತಿಂಗಳುಗಳಿಂದ ಬೀಗ ಹಾಕಲ್ಪಟ್ಟಿದ್ದ”ಅರಿವು ಕೇಂದ್ರ(ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ)ಗ್ರಂಥಾಲಯದ ಬೀಗವನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಒಡೆದು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದ್ದಾರೆ.

- Advertisement -

ಕೆಂಚರ್ಲಹಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕರಾದ ಕೆ.ಪ್ರಭಾಕರ್ ಅವರ ವಿರುದ್ಧ ಕರ್ತವ್ಯ ಲೋಪ,ದುರ್ನಡತೆ,ಕರ್ತವ್ಯ ನಿರ್ಲಕ್ಷ್ಯ ಹಾಗೂ ಸತತ ಗೈರು ಹಾಜರಿಯ ಗಂಭೀರ ಆರೋಪಗಳು ಕೇಳಿಬಂದಿದ್ದವು.ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ,ಇವರನ್ನು ಗ್ರಂಥಾಲಯ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಗ್ರಂಥಾಲಯದ ಮೇಲ್ವಿಚಾರಕರು ಇಲಾಖೆ ನೀಡಿದ್ದ ಕಾರಣ ಕೇಳಿ ನೋಟೀಸ್ ಸ್ವೀಕರಿಸಲು ನಿರಾಕರಿಸಿದ್ದಲ್ಲದೆ,ಗ್ರಂಥಾಲಯದ ಚಾವಿಯನ್ನೂ ಹಸ್ತಾಂತರಿಸದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದರು. ಇದರಿಂದಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಪಿಡಿಓ ನೇತೃತ್ವದಲ್ಲಿ, ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ಗ್ರಂಥಾಲಯದ ಬೀಗವನ್ನು ಸುತ್ತಿಗೆಯಿಂದ ಹೊಡೆದು ಒಡೆಯಲಾಯಿತು.

ಬಳಿಕ ಅಧಿಕಾರಿಗಳು ಗ್ರಂಥಾಲಯದ ಒಳಪ್ರವೇಶಿಸಿ ಪರಿಶೀಲನೆ ನಡೆಸಿದರು.ಸದ್ಯ ಗ್ರಂಥಾಲಯದಲ್ಲಿರುವ ಪುಸ್ತಕಗಳು,ಪೀಠೋಪಕರಣಗಳು ಹಾಗೂ ಕ್ಯಾರಂ ಬೋರ್ಡ್ ಸೇರಿದಂತೆ ಇತರೆ ಪರಿಕರಗಳನ್ನು ಪರಿಶೀಲಿಸಿ ಸಾರ್ವಜನಿಕರ ಓದಿಗೆ ಅನುಕೂಲ ಮಾಡಿಕೊಡಲಾಗಿದೆ.

ಇದನ್ನು ಓದಿದ್ದೀರಾ..?ಕೋಲಾರ | ಯುಗಂಧರ್ ನಾರಾಯಣಸ್ವಾಮಿಗೆ ನುಡಿ ನಮನ ಕಾರ್ಯಕ್ರಮ

ತಿಂಗಳುಗಳಿಂದ ಮುಚ್ಚಿ ಹೋಗಿದ್ದ ಜ್ಞಾನದ ದೇಗುಲಕ್ಕೆ ಕೊನೆಗೂ ಮುಕ್ತಿ ಸಿಕ್ಕಂತಾಗಿದ್ದು,ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಬೀಗ ತೆಗೆಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿರುವುದಕ್ಕೆ ಕೆಂಚರ್ಲಹಳ್ಳಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...