ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

Date:

Advertisements

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆ. ಸರ್ಕಾರ ವಿಶೇಷಚೇತನರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಸಮರ್ಪಕವಾಗಿ ತಲುಪುತ್ತಿಲ್ಲ. ಇದರಿಂದ ಸೌಲಭ್ಯಕ್ಕಾಗಿ ಪರದಾಡಬೇಕಾಗಿದೆ ಎಂದು ಚಿಂತಾಮಣಿ ತಾಲೂಕಿನ ವಿಶೇಷಚೇತನರು ಅಸಮಾಧಾನ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮ ಪಂಚಾಯಿತಿಯಲ್ಲಿ ಅಂಗವಿಕಲರಿಗೆ ರ್‍ಯಾಂಪ್‌ ಮಾಡದೆ ಇರುವ ಕಾರಣ ಆಕ್ರೋಶಗೊಂಡ ಅಂಗವಿಕಲರು ಪಂಚಾಯಿತ ಎದುರು ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ವಿಶೇಷಚೇತನ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಿರಣ ನಾಯಕ್ ಮಾತನಾಡಿ, “ಸರ್ಕಾರದ ವಿವಿಧ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ್‍ಯಾಂಪ್‌ ವ್ಯವಸ್ಥೆ ಇರಬೇಕು. ದೈಹಿಕ ನ್ಯೂನತೆಯಿಂದ ಕೂಡಿದ ವಿಶೇಷಚೇತನರು ಸರಾಗವಾಗಿ ಕಚೇರಿಗಳನ್ನು ತಲುಪಲು ಸಾಧ್ಯವಾಗುತ್ತದೆ. ಆದರೆ, ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಈ ಸೌಲಭ್ಯವೇ ಇಲ್ಲ” ಎಂದು ಆರೋಪಿಸಿದರು.

Advertisements

“ಅಂಗವಿಕಲರೆಂದು ಅನುಕಂಪ ತೋರಿಸುವವರೇ ಹೆಚ್ಚು.ಆದರೆ, ಸರ್ಕಾರಿ ಸೌಲಭ್ಯ ಒದಗಿಸಿಕೊಡುವಲ್ಲಿ ಆಡಳಿತಯಂತ್ರ ಹಿಂದೆ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

.”ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ರ್‍ಯಾಂಪ್‌ ವ್ಯವಸ್ಥೆ ಚಾಲ್ತಿಗೆ ಬರುತ್ತದೆ. ಆದಾದ ನಂತರ ಮತ್ತೆ ಮೂಲೆಗುಂಪು ಆಗುತ್ತಿದೆ. ಇದರಿಂದ ವಿಶೇಷಚೇತನರು ಮೆಟ್ಟಿಲುಗಳನ್ನು ಹತ್ತಿ ಕಚೇರಿ ತಲುಪಲು ಮತ್ತೊಬ್ಬರ ಸಹಾಯ ಪಡೆಯುವ ಅನಿವಾರ್ಯತೆ ಎದುರಾಗಿದೆ” ಎಂದರು.

“ಐದರಿಂದ ಆರು ಮೆಟ್ಟಿಲು ಇರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಅಂಗವಿಕಲರು ಪ್ರವೇಶ ಮಾಡಲು ಬಹಳಷ್ಟು ಕಷ್ಟ ಪಡಬೇಕಾಗುತ್ತದೆ. ಅದರಿಂದ ಉಪ್ಪರಪೇಟೆ ಸೇರಿದಂತೆ ಚಿಂತಾಮಣಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ರ್‍ಯಾಂಪ್‌ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ಕೊಡಲು ತಕರಾರು: ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ

“ರ್‍ಯಾಂಪ್‌ ವ್ಯವಸ್ಥೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಪಂಚಾಯತ್ ಎದುರು ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಿಜ್ವಾನ್ ಬಾಷಾ, ರಿಹಾನ ತಾಜ್, ನೂರ್ ಜಾನ್, ರಾಮಕೃಷ್ಣ, ಮಂಜುಳಾ, ಮೊಹಮ್ಮದ್ ಅಜರುದ್ದೀನ್, ಮುನಿಯಪ್ಪ, ನಿಖಿಲ್, ಮುನೇಂದ್ರ, ಅಂಜಮ್ಮ, ಕವಿತಾ, ಹರ್ಷಿತ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X