ಚಿಂತಾಮಣಿ | ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಗುದ್ದಿದ ಪೆಟ್ರೋಲ್ ತುಂಬಿದ ಲಾರಿ.

Date:


ರಸ್ತೆಯಲ್ಲಿ ಡ್ರೈವಿಂಗ್ ಮಾಡುವಾಗ ಮೈಯಲ್ಲಾ ಕಣ್ಣಾಗಿ ಇರಬೇಕು ಅಂತಾರೆ.ಆದರೆ ಇಲ್ಲೊಬ್ಬ ಚಾಲಕನ ಅಜಾಗರೂಕತೆಯಿಂದ ಸ್ವಲ್ಪದರಲ್ಲೇ ಬಾರೀ ಅನಾಹುತಾ ತಪ್ಪಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಕ್ಷಣ ಮಾತ್ರದಲ್ಲೇ ಎರಡು ಲಾರಿಗಳು ಹೊತ್ತಿ ಉರಿದಿವೆ. ಅಷ್ಟಕ್ಕೂ ಆ ಘಟನೆ ನಡೆದಿದ್ದ ಎಲ್ಲಿ ಅಂತಿರಾ ಈ ಸ್ಟೋರಿ ನೋಡಿ.

- Advertisement -

ಹೌದು ಹೀಗೆ ಹೊತ್ತಿ ಉರಿಯುತ್ತಿರುವ ಎರಡು ಲಾರಿಗಳು, ಏನಾಯ್ತೋ ಅಂತ ನೋಡಲು ಹೋಗಿ ಓಡೋಡಿ ಬರುತ್ತಿರುವ ಜನರು, ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಗುದ್ದಿದ ಸಿಸಿ ಟಿವಿ ದೃಶ್ಯ ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ 11 ನೇ ಮೈಲಿ ಬಳಿ. ದೊಡ್ಡಬಳ್ಳಾಪುರದಿಂದ ನೆಲಮಂಗಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಹಾಲಿನ ಲಾರಿ ರಸ್ತೆ ದಾಟುವಾಗು ಒಂದು ಕ್ಯಾಂಟರ್ ರಸ್ತೆಯಲ್ಲಿ ಸ್ಲೋ ಆಗಿದೆ. ಆದರೆ ಹಿಂದೆ ಅತೀ ವೇಗವಾಗಿ ಬಂದ ಪೆಟ್ರೋಲ್ ತುಂಬಿದ್ದ ಲಾರಿ ಏಕಾಏಕಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇನ್ನೂ ಮರಕ್ಕೆ ಡಿಕ್ಕಿ ಹೊಡೆಯುತ್ತಿದ್ದಂತೆ ಪೆಟ್ರೋಲ್ ತುಂಬಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಜೊತೆಗೆ ಪಕ್ಕದಲ್ಲೇ ಇದ್ದ ಹಾಲಿನ ಲಾರಿಗೂ ಕೂಡ ಬೆಂಕಿ ತಗುಲಿಗೆ. ಕೂಡಲೇ ಎರಡೂ ಲಾರಿಗಳಿಗೂ ಬೆಂಕಿ ಹತ್ತಿ ಕೊಂಡಿದೆ. ಕೂಡಲೇ ಇಬ್ಬರೂ ಚಾಲಕರೂ ಕೂಡ ಲಾರಿಯಿಂದ ಕೆಳಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ತುಂಬಿದ ಕ್ಯಾಂಟರ್ ನಲ್ಲಿ ಸಾವಿರಾರು ಲೀ ಪೆಟ್ರೋಲ್ ಇದ್ದ ಕಾರಣ ಏನಾದರೂ ಒಂದು ವೇಳೆ ಟ್ಯಾಂಕರ್ ಸ್ಪೋಟಗೊಂಡಿದ್ದರೆ ಬಾರೀ ಅನಾಹುತವೇ ಆಗುತ್ತಿತ್ತು. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ‌ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾದರೂ. ಸುಮಾರು 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾದರೂ. ವೇಳೆ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಎದುರಾಗಿತ್ತು. ಅರಳುಮಲ್ಲಿಗೆ ಗೇಟ್ ನಿಂದ ಕಾಡನೂರು ಕೈಮರದ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಇನ್ನೂ ದೊಡ್ಡಬೆಳವಂಗಲ ಪೋಲೀಸರು ಸ್ಥಳ ಪರಿಶೀಲನೆ ಮಾಡಿ ಜನರನ್ನ ನಿಯಂತ್ರಿಸುವ ಕೆಲಸಕ್ಕೆ ಮುಂದಾದರೂ. ಬೆಳಗ್ಗೆಯಿಂದಲೂ 18 ಜನ ಅಗ್ನಿಶಾಮಕ ಸಿಬ್ಬಂದಿ ಕೆಲಸ ಮಾಡಿ, ಕೊನೆಗೆ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸುವಲ್ಲಿ ಅಗ್ನಿಶಾಮಕ ‌ಸಿಬ್ಬಂದಿ ಯಶಸ್ವಿಯಾದರು.

ಇದನ್ನು ಓದಿದ್ದೀರಾ..?ಕೋಲಾರ | ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ, ವ್ಯವಸ್ಥೆ ಪರಿಶೀಲನೆ – ಈ ದಿನ.ಕಾಮ್

ಒಟ್ಟಾರೆ ಪೆಟ್ರೋಲ್ ತುಂಬಿದ ಲಾರಿ ಚಾಲಕ‌ ಓವರ್ ಟೇಕ್ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು , ಚಾಲಕನ ಅತೀ ವೇಗವೇ ಅಪಘಾತ ಕಾರಣ ಎನ್ನಲಾಗಿದೆ. ಇನ್ನಾದರೂ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದ ಚಾಲನೆ ಮಾಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...