ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿ ಗ್ರಾಮದ ರೈಲ್ವೆ ಸ್ಟೇಷನ್ ಪಕ್ಕ ಅಕ್ರಮವಾಗಿ ನಡೆಯುತ್ತಿದ್ದ ಜೂಜು(ಇಸ್ಪೀಟ್)ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ಇಸ್ಪೀಟ್ ಆಟವಾಡುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು,ಅವರಿಂದ ಲಕ್ಷಾಂತರ ರೂಪಾಯಿ ನಗದು ಹಾಗೂ ಜೂಜಿಗೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳವೊಂದರಲ್ಲಿ ಕೆಲವು ವ್ಯಕ್ತಿಗಳು ಕಾನೂನುಬಾಹಿರವಾಗಿ ಹಣವನ್ನು ಪಣಕ್ಕಿಟ್ಟು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡವು ಜೂಜು ನಡೆಯುತ್ತಿದ್ದ ಜಾಗದ ಮೇಲೆ ಹಠಾತ್ ದಾಳಿ ನಡೆಸಿತು.ಪೊಲೀಸರು ಸ್ಥಳವನ್ನು ಸುತ್ತುವರಿಯುತ್ತಿದ್ದಂತೆ ಜೂಜುಕೋರರು ಓಡಲು ಯತ್ನಿಸಿದರಾದರೂ,ಸಿಬ್ಬಂದಿಗಳು ಜಾಗರೂಕತೆಯಿಂದ 5 ಮಂದಿ ಆರೋಪಿಗಳನ್ನು ಸ್ಥಳದಲ್ಲೇ ಹೆಡೆಮುರು ಕಟ್ಟಿದ್ದಾರೆ.
ಇದನ್ನು ಓದಿದ್ದೀರಾ..? ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ
ದಾಳಿಯ ವೇಳೆ ಕರಿಯಪಲ್ಲಿ ಗ್ರಾಮದವರಾದ ಶಿವಾನಂದ ಬಿನ್ ರೆಡ್ಡಪ್ಪ ಚಂದ್ರಶೇಖರ್,ಶಶಿ,ಮನೋಜ್, ಕೇಶವ,ರವರನ್ನು ವಶಕ್ಕೆ ಪಡೆದು.2,470/- ನಗದು ಹಣ ಮತ್ತು ಜೂಜಿನ ಪರಿಕರಗಳು ಆಟಕ್ಕೆ ಬಳಸುತ್ತಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟಕ್ಕೆ ಹಾಸಿದ್ದ ಪ್ಲಾಸ್ಟಿಕ್ ಚೀಲಗಳು.ಜಪ್ತಿ ಮಾಡಿಕೊಂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ




