​ಚಿಂತಾಮಣಿ | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ:ಚಿಂತಾಮಣಿಯಲ್ಲಿ ತಡರಾತ್ರಿ ಹೈಡ್ರಾಮಾ!

Date:

ವೈದ್ಯರ ಎಡವಟ್ಟಿನಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್ ಎಂಬುವವರ ಪತ್ನಿ ನರ್ಮದಾ(24)ಮೃತಪಟ್ಟ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆಗೆ (ಮಕ್ಕಳಾಗದಂತೆ ಆಪರೇಷನ್)ಒಳಗಾಗಿದ್ದ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ,ಶಸ್ತ್ರಚಿಕಿತ್ಸೆಯಾದ ಜಾಗದಲ್ಲಿ ಅತಿಯಾದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ...

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ ಚಟುವಟಿಕೆಗಳ ವಿಸ್ತರಣೆ ಹಾಗೂ ರಸ್ತೆ ಒತ್ತುವರಿಯಿಂದಾಗಿ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ಸಮಸ್ಯೆಯನ್ನು ಸುಧಾರಿಸಲು ಪೊಲೀಸ್‌ ಇಲಾಖೆ...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್...

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ 22 ಸೀಟುಗಳ ಮತ ಎಣಿಕೆ ನಡೆಯುತ್ತಿದ್ದು ಇಲ್ಲಿಯವರೆಗೂ 254 ಡೆಮೊಕ್ರಟಿಕ್ ಅಭ್ಯರ್ಥಿಗಳು ಮತ್ತು 169 ರಿಪಬ್ಲಿಕನ್ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಸಮೀಕ್ಷೆಗಳ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ವೈದ್ಯರ ಬೇಜವಾಬ್ದಾರಿತನದಿಂದಲೇ ನರ್ಮದಾ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು,ಮೃತದೇಹವನ್ನು ಆಸ್ಪತ್ರೆಯ ಮುಂದಿಟ್ಟು ತಡರಾತ್ರಿಯಿಡೀ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ವೈದ್ಯರು ಸ್ಥಳಕ್ಕೆ ಬಾರದೆ ಇರುವುದು ಆಕ್ರೋಶಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ಇದನ್ನು ಓದಿದ್ದೀರಾ..? ಚಿಂತಾಮಣಿ |ನೃತ್ಯದ ಜೊತೆಗೆ ಈಜಿನ ಪಾಠ:ಮಕ್ಕಳಿಗಾಗಿ ವಿಶೇಷ ಶಿಬಿರ ಹಮ್ಮಿಕೊಂಡ ಡ್ಯಾನ್ಸ್ ಮಾಸ್ಟರ್ ಕೇಶವ

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಇಬ್ಬರು ಹಸುಗೂಸುಗಳನ್ನು ಬಿಟ್ಟು ತಾಯಿ ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕ ಸಾಗರ ಮೂಡಿಸಿದೆ.ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಮೃತರ ಕುಟುಂಬಸ್ಥರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ...

ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ...

ರಾಯಚೂರು | ಪಡಿತರ ಚೀಟಿ ಇ-ಕೆವೈಸಿ ನ.30 ಕೊನೆ ದಿನ; ಜಿಲ್ಲೆಯಲ್ಲಿ 1.63 ಲಕ್ಷ ಫಲಾನುಭವಿಗಳ ಬಾಕಿ

ಜಿಲ್ಲೆಯ ಎಲ್ಲ ಪಡಿತರ ಚೀಟಿಗಳಲ್ಲಿನ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಇ-ಕೆವೈಸಿ...