ಚಿಂತಾಮಣಿ | ಕೋಲ್ಕತ್ತಾ ಘಟನೆ ಖಂಡಿಸಿ ಖಾಸಗಿ ಆಸ್ಪತ್ರೆ, ಕ್ಲೀನಿಕ್‌ಗಳು ಇಂದು ಬಂದ್

Date:

ಆಗಸ್ಟ್ 9 ರಂದು ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಆಗಸ್ಟ್ 17 ಶನಿವಾರ ಬೆಳಗ್ಗೆ 6 ರಿಂದ ಆಗಸ್ಟ್ 18 ಭಾನುವಾರದಂದು ಬೆಳಗ್ಗೆ 6 ಗಂಟೆವರಿಗೆ ಖಾಸಗಿ ಆಸ್ಪತ್ರೆಗಳು ಬಂದ್ ಮಾಡುವುದಾಗಿ ಚಿಂತಾಮಣಿಯ ಐ.ಎಂ.ಎ. ಅಧ್ಯಕ್ಷ ಡಾ.ಪಾಷಾ ತಿಳಿಸಿದ್ದಾರೆ.

- Advertisement -

ಅತ್ಯಾಚಾರ ಹಾಗೂ ಕೊಲೆಯಾದ ಕೋಲ್ಕತ್ತಾದ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಈ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ನ ಸಮಯದಲ್ಲಿ ಒಪಿಡಿ ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ದೇಶಾದ್ಯಂತ ಆಧುನಿಕ ಔಷಧ ವೈದ್ಯರ ಸೇವೆಯನ್ನು ಹಿಂತೆಗೆದುಕೊಳ್ಳಲಾಗುತ್ತದೆ. ಐಎಂಎ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಐ.ಎಂ.ಎ. ಕಾರ್ಯದರ್ಶಿ ಡಾ. ಶ್ರೀಧರ್ ಮಾತನಾಡಿ, “ಪಶ್ಚಿಮ ಬಂಗಾಳದ ಸರ್ಕಾರಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಯನ್ನು ನಡೆಸಿದ್ದಲ್ಲದೆ ಕಿಡಿಗೇಡಿಗಳು ಆಸ್ಪತ್ರೆಯ ಆವರಣಕ್ಕೆ ನುಗ್ಗಿ ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷೆ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ, ಪೀಠೋಕರಣ, ಔಷಧ ಕೇಂದ್ರ, ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸಲಕರಣೆಗಳನ್ನು ಧ್ವಂಸಗೊಳಿಸಿದ್ದಾರೆ. ಹಿಂಸಾಚಾರ ಹಾಗೂ ದೃಷ್ಕೃತ್ಯಗಳನ್ನು ನಡೆಸಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಚಿಂತಾಮಣಿ ತಾಲ್ಲೂಕು ಐ.ಎಂ.ಎ. ವತಿಯಿಂದ 24 ಗಂಟೆಗಳ ಧರಣಿಯನ್ನು ಹಮ್ಮಿಕೊಂಡಿದ್ದೇವೆ‌. ಆಗಸ್ಟ್ 17 ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ಭಾನುವಾರದಂದು ಬೆಳಿಗ್ಗೆ 6 ಗಂಟೆವರಿಗೆ ಖಾಸಗಿ ಆಸ್ಪತ್ರೆ, ಆಯುರ್ವೇದ, ಡೆಂಟಲ್ ಡಾಕ್ಟರ್, ಕ್ಲೀನಿಕ್, ಓ.ಪಿ.ಡಿ. ಲ್ಯಾಬ್ ಸೇವೆಗಳು ಇರುವುದಿಲ್ಲ ಆದರೆ, ಅಪಘಾತ ಅಥವಾ ತುರ್ತು ಚಿಕಿತ್ಸೆ, ಪ್ರಾಣಾಪಾಯ ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ಕೆಲವು ಆಸ್ಪತ್ರೆಗಳು ತೆರೆದಿರುತ್ತದೆ” ಎಂದು ತಿಳಿಸಿದರು.

“ಹಿಂಸಾಚಾರ ಮತ್ತು ದುಷ್ಕೃತ್ಯಗಳನ್ನು ಡಾಕ್ಟರ್ ಅಥವಾ ಆಸ್ಪತ್ರೆ, ಕ್ಲೀನಿಕ್‌ಗಳ ಮೇಲೆ ನಡೆಸುವವರಿಗೆ ತಕ್ಕ ಶಿಕ್ಷೆಯನ್ನು ನೀಡುವ ನಿಯಮಾವಳಿಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಧರಣಿ ನಿರತ ಡಾಕ್ಟರ್ ಹಾಗು ಸಿಬ್ಬಂದಿಗಳು ಬೆಳಿಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಿಂದ ಜೋಡಿ ರಸ್ತೆಯ ಪಿ.ಸಿ.ಆರ್.ಕಾಂಪ್ಲೆಕ್ಸ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸುವುದಾಗಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...