ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿಯ ಗುಡಿಸಲಹಳ್ಳಿ ಗ್ರಾಮದಲ್ಲಿ ಸ್ಮಶಾನ ಮಂಜೂರು ಮಾಡುವಂತೆ ಹಾಗೂ ಸ್ಮಶಾನಕ್ಕೆ ದಾರಿ ಮಾಡಿಕೊಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದ ಹಿನ್ನೆಲೆ ಗ್ರಾಮಕ್ಕೆ ತಾಲೂಕು ದಂಡಾಧಿಕಾರಿ ಸುದರ್ಶನ್ ಯಾದವ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಸರ್ವೆ ಕಾರ್ಯ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗ್ರಾಮದ ಮಂಜುನಾಥ್ ಮಾತನಾಡಿ, “ಗ್ರಾಮದ ಸರ್ವೆ ನಂ:39ರ ಜಮೀನಿನಲ್ಲಿ ಸದ್ಯ ಮೃತಪಟ್ಟವರ ಶವಗಳನ್ನು ಹೂಳಲಾಗುತ್ತಿದ್ದು, ಸದರಿ ಜಮೀನಿನಲ್ಲಿ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಿಕೊಟ್ಟು ದಾರಿ ಮಾಡಿಕೊಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಲಾಗಿದೆ. ಅಧಿಕಾರಿಗಳು ಭೇಟಿ ನೀಡಿ ಸ್ಮಶಾನಕ್ಕೆ ಜಾಗ ಮಾಡಿಕೊಡುವ ಭರವಸೆ ನೀಡಿದ್ದಾರೆ” ಎಂದರು.
ಇದನ್ನೂ ಓದಿ: ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ