ಚಿಂತಾಮಣಿ | ಅಪ್ರಾಪ್ತರಿಗೆ ವಾಹನ ನೀಡಿದರೆ 25 ಸಾವಿರ ದಂಡ: ಎಸ್ಪಿ ಕುಶಾಲ್ ವಾರ್ನಿಂಗ್

Date:

Advertisements

ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡುವ ಅಪ್ರಾಪ್ತರ ಪೋಷಕರಿಗೆ 25 ಸಾವಿರ ದಂಡ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸ್ ಎಚ್ಚರಿಕೆ ನೀಡಿದರು.

ಇಂದು ಚಿಂತಾಮಣಿ ನಗರ ಭಾಗದಲ್ಲಿ ಅಪ್ರಾಪ್ತರು ಓಡಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ತಡೆದು ನಗರ ಠಾಣೆ ಪೊಲೀಸರು ದಂಡ ವಿಧಿಸಿ ಅವರ ಪೋಷಕರಿಗೆ ಕಾನೂನಿನ ಅರಿವು ಮೂಡಿಸಿದರು.

ಈ ವೇಳೆ ಎಸ್ ಪಿ ಕುಶಾಲ್ ಚೌಕ್ಸ್ ಮಾತನಾಡಿ, “ಹೆಲ್ಮೆಟ್ ಧರಿಸಲು ಉದಾಸೀನತೆ ತೋರುವ ಜೊತೆಗೆ ಸಂಚಾರಿ ನಿಯಮ ಉಲ್ಲಂಘಿಸುವುದು ಸರಿಯಲ್ಲ. ವಾಹನ ಸಂಚಾರ ನಿಯಮ ಎಲ್ಲೆಡೆ ಅನ್ವಯವಾಗುತ್ತದೆ.‌ ವಾಹನ ಸವಾರರು ತಪ್ಪದೇ ಪಾಲಿಸಬೇಕೆಂದು ಸೂಚಿಸಿದರು. ಅಪ್ರಾಪ್ತ ವಯಸ್ಸಿನ ವಾಹನ ಚಾಲಕರ ನಿಯಂತ್ರಣ ಕುರಿತು ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೆ ಚಿಕ್ಕಬಳ್ಳಾಪುರದಲ್ಲಿ 40 ಹಾಗೂ ಬಾಗೇಪಲ್ಲಿಯಲ್ಲಿ 22 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಅವರ ಪೋಷಕರನ್ನು ಕರೆಸಿ ಕಾನೂನಿನ ಅರಿವು ಮೂಡಿಸಲಾಗಿದೆ. ಅಪ್ರಾಪ್ತರಿಗೆ ಯಾವುದೇ ಕಾರಣಕ್ಕೂ ವಾಹನ ನೀಡಬಾರದು. ಇದು ಮುಂದುವರಿದರೆ ಕ್ರಮ ಕೈಗೊಳ್ಳಲಾಗುವುದು. ಸಂಚಾರಿ ನಿಯಮ ಪಾಲಿಸದೆ ವಾಹನ ಚಲಾಯಿಸುವವರ ಮೇಲೆ ಹದ್ದಿನ ಕಣ್ಣಿಡಲಾಗಿದೆ” ಎಂದು ಎಚ್ಚರಿಕೆ ನೀಡಿದರು.

Advertisements
WhatsApp Image 2025 07 26 at 10.00.14 AM 1

ಇದನ್ನೂ ಓದಿ: ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ

ಈ ಸಂದರ್ಭದಲ್ಲಿ ಅಡಿಷನಲ್ ಎಸ್ಪಿ ಜಗನ್ನಾಥ್ ರೈ, ಡಿವೈಎಸ್ಪಿ ಮುರುಳಿಧರ್, ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X