ಚಿಂತಾಮಣಿ | ಖಾಸಗಿ ಬಸ್ಸುಗಳ ವಿರುದ್ಧ ರಸ್ತೆಗಿಳಿದು ಆರ್.ಟಿ.ಒ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ-ದಂಡದ ಬಿಸಿ

Date:

ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದ ಖಾಸಗಿ ಬಸ್‌ಗಳ ವಿರುದ್ಧ ಚಿಂತಾಮಣಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಎ.ಆರ್.ಟಿ.ಒ)ರಸ್ತೆಗಿಳಿದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

ಇತ್ತೀಚೆಗೆ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಬಸ್ಸಿನ ಟಾಪ್ (ಮೇಲ್ಛಾವಣಿ) ಮೇಲೆ ಕುಳಿತು ಪ್ರಯಾಣಿಸುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದ ತಂಡ ಚಿಂತಾಮಣಿ ವ್ಯಾಪ್ತಿಯಲ್ಲಿ ದಿಢೀರ್ ಪರಿಶೀಲನೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘಿಸಿ ಬಸ್‌ನ ಟಾಪ್ ಮೇಲೆ ಪ್ರಯಾಣಿಕರನ್ನು ಕೂರಿಸಿಕೊಂಡಿದ್ದ ಬಸ್‌ಗಳನ್ನು ತಡೆದು ನಿಲ್ಲಿಸಿದ ಅಧಿಕಾರಿಗಳು,ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ,ಸ್ಥಳದಲ್ಲೇ ನಿಯಮ ಉಲ್ಲಂಘಿಸಿದ ಬಸ್‌ಗಳಿಗೆ ಭಾರಿ ಪ್ರಮಾಣದ ದಂಡ ವಿಧಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಚಿಂತಾಮಣಿ ಸಾರಿಗೆ ಇನ್ಸ್ಪೆಕ್ಟರ್ ಮೊಹಮ್ಮದ್ ಹುಸೈನ್”ಖಾಸಗಿ ಹಾಗೂ ಸರ್ಕಾರಿ ಬಸ್‌ಗಳಲ್ಲಿ ನಿಯಮ ಮೀರಿ ಪ್ರಯಾಣಿಕರನ್ನು ಕರೆದೊಯ್ಯುವ ಬಗ್ಗೆ ನಿರಂತರ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ನಿಯಮ ಉಲ್ಲಂಘಿಸುವ ಬಸ್‌ಗಳಿಗೆ ಹಲವು ಬಾರಿ ವಾರ್ನಿಂಗ್ ನೀಡಲಾಗಿದ್ದು, ಚೆಕ್ ರಿಪೋರ್ಟ್ ಕೂಡ ಇಶ್ಯೂ ಮಾಡಲಾಗಿದೆ. ನಿನ್ನೆ ಬಸ್ಸೊಂದರ ಟಾಪ್ ಮೇಲೆ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ವಿಷಯ ಮಾಧ್ಯಮಗಳ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಅಂತಹ ಬಸ್‌ಗಳನ್ನು ಪತ್ತೆ ಹಚ್ಚಿ ಇಂದಿನಿಂದಲೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ನಿಗದಿತ ಸೀಟಿಂಗ್ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಳ್ಳಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ, ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಕರೆದೊಯ್ದರೆ ಅಂತಹ ಬಸ್‌ಗಳ ಪರ್ಮಿಟ್ ರದ್ದುಗೊಳಿಸಲಾಗುವುದು,” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಬೆಸ್ಕಾಂ ಖಾಸಗೀಕರಣಕ್ಕೆ ವಿರೋಧ: ಅನಿವಾರ್ಯವಾದರೆ ಹೋರಾಟಕ್ಕೆ ತೀರ್ಮಾನ

​ಈ ಕಾರ್ಯಾಚರಣೆಯು ಸಾರ್ವಜನಿಕರ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದ್ದು, ಮುಂದಿನ ದಿನಗಳಲ್ಲಾದರೂ ಖಾಸಗಿ ಬಸ್‌ಗಳ ಮನಬಂದಂತೆ ವರ್ತಿಸುವ ರೀತಿಗೆ ಬ್ರೇಕ್ ಬೀಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...