ಚಿಂತಾಮಣಿ | ಯುವಜನತೆಗೆ ಸ್ವಯಂ ಉದ್ಯೋಗದ ಆಸರೆ: ಡ್ರೀಮ್ ಡೀಲ್ ಕಂಪನಿಯಿಂದ ಭರವಸೆಯ ಹೆಜ್ಜೆ

Date:

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರುದ್ಯೋಗ ಒಂದು ದೊಡ್ಡ ಶಾಪವಾಗಿ ಪರಿಣಮಿಸಿದೆ.ಈ ನಿಟ್ಟಿನಲ್ಲಿ ಯುವಜನತೆಗೆ ದಾರಿದೀಪವಾಗಲು ಮತ್ತು ಆರ್ಥಿಕ ಸಬಲೀಕರಣ ತರಲು ‘ಡ್ರೀಮ್ ಡೀಲ್'(Dream Deal) ಕಂಪನಿ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಚಿಂತಾಮಣಿ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕರಾದ ಮೊಹಮ್ಮದ್ ಮುಝಮಿಲ್ ಮತ್ತು ಹುಸೇನ್ ಸಾಬಿ ಕಂಪನಿ ಉದ್ದೇಶ ಹಾಗೂ ಕಾನೂನಾತ್ಮಕ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನಿರುದ್ಯೋಗಿ ಯುವಕ-ಯುವತಿಯರಿಗೆ ಕೇವಲ ಕೆಲಸ ನೀಡುವುದಲ್ಲದೆ,ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶವನ್ನು ಸಂಸ್ಥೆ ಹೊಂದಿದೆ.ಈಗಾಗಲೇ ಸುಮಾರು 5,000ಕ್ಕೂ ಹೆಚ್ಚು ಜನರಿಗೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ನಿರ್ದೇಶಕರು ಹೆಮ್ಮೆಯಿಂದ ತಿಳಿಸಿದರು.

ಸಂಸ್ಥೆಯ ಮೇಲೆ ಕೇಳಿಬಂದಿದ್ದ ಅಪಸ್ವರಗಳಿಗೆ ಉತ್ತರಿಸಿದ ಅವರು, “ನಮ್ಮ ಕಂಪನಿಯ ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ.ರಾಮನಗರ ಸೇರಿದಂತೆ ವಿವಿಧೆಡೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ. ಹೈಕೋರ್ಟ್‌ನಿಂದಲೂ ಸಕಾರಾತ್ಮಕ ಅನುಮತಿ ದೊರೆತಿದ್ದು,ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಗ್ರಾಹಕರಿಗೆ ಭರವಸೆ ನೀಡಿದರು.

ಕಂಪನಿಯು ಜನರಿಗೆ ನೀಡಿದ ಭರವಸೆಯಂತೆ ಮನೆ ಮನೆಗೆ ಗುಣಮಟ್ಟದ ಉತ್ಪನ್ನಗಳನ್ನು ತಲುಪಿಸುವ ಜವಾಬ್ದಾರಿಯನ್ನು ಹೊತ್ತಿದೆ.ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರ ಮಾರುಕಟ್ಟೆಯ ಮೂಲಕ ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.

ಕೇವಲ ವ್ಯವಹಾರವಷ್ಟೇ ಅಲ್ಲದೆ, ಜಿಲ್ಲೆಯ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವುದು ಸಂಸ್ಥೆಯ ಮೂಲ ಮಂತ್ರವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ..? ಕೋಲಾರ | ಬಿಸಿಲಿನ ಧಗೆಯಿಂದ ರಕ್ಷಣೆ ಪಡೆಯಲು ಜಿಲ್ಲೆಯ ಜನರು ಮುಂಜಾಗ್ರತಾ ಕ್ರಮ ವಹಿಸಿ : ಎಂ.ಆರ್.ರವಿ, ಜಿಲ್ಲಾಧಿಕಾರಿ

​ಪತ್ರಿಕಾಗೋಷ್ಠಿಯಲ್ಲಿ ಕಂಪನಿಯ ಪ್ರಮುಖರಾದ ನವೀನ್ ಕುಮಾರ್ ಎನ್,ಚಂದ್ರಶೇಖರ್ ರೆಡ್ಡಿ,ಸುಧಾರಾಣಿ ಎನ್,ದೀಪ ಕೆ,ರತ್ನಮ್ಮ,ರಹತ್ ಬಾನು,ತುಳಸಿ ಜಿ,ನರಸಿಂಮೂರ್ತಿ, ನಾರಾಯಣಸ್ವಾಮಿ,ಪ್ರವರ್ತಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.ಡ್ರೀಮ್ ಡೀಲ್’ ಮೂಲಕ ಉದ್ಯೋಗ ಪಡೆದ ಯುವಕರು ತಮ್ಮ ಜೀವನ ಮಟ್ಟ ಸುಧಾರಿಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...