ಚಿಂತಾಮಣಿ |ನೃತ್ಯದ ಜೊತೆಗೆ ಈಜಿನ ಪಾಠ:ಮಕ್ಕಳಿಗಾಗಿ ವಿಶೇಷ ಶಿಬಿರ ಹಮ್ಮಿಕೊಂಡ ಡ್ಯಾನ್ಸ್ ಮಾಸ್ಟರ್ ಕೇಶವ.

Date:

ನಗರದ ಪ್ರಸಿದ್ಧ’ಕೇಶವ ಅಕಾಡೆಮಿ’ಯ ಸಂಸ್ಥಾಪಕರು ಹಾಗೂ ಖ್ಯಾತ ಡ್ಯಾನ್ಸ್ ಮಾಸ್ಟರ್ ಆಗಿರುವ ಕೇಶವ ಅವರು,ಈ ಬಾರಿಯ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ವಿಶೇಷವಾಗಿ ಈಜು ತರಬೇತಿಯನ್ನು ನೀಡುತ್ತಿದ್ದಾರೆ.ಕಳೆದ 15 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಅವರು,ಮಕ್ಕಳಿಗೆ ಆತ್ಮರಕ್ಷಣೆ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಗಾಗಿ ಈಜು ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ.

- Advertisement -

ಬೇಸಿಗೆಯ ರಜಾ ದಿನಗಳಲ್ಲಿ ಮಕ್ಕಳು ಕೆರೆ,ಕುಂಟೆಗಳಿಗೆ ಹೋಗಿ ಅನಾಹುತಕ್ಕೀಡಾಗುವುದನ್ನು ತಪ್ಪಿಸಲು,ಕೇಶವ ಅವರು ಸುರಕ್ಷಿತವಾದ ಬಾವಿಗಳಲ್ಲಿ ಮಕ್ಕಳಿಗೆ ಈಜು ಕಲಿಸುತ್ತಿದ್ದಾರೆ. ನುರಿತ ತರಬೇತುದಾರರ ಮೇಲ್ವಿಚಾರಣೆಯಲ್ಲಿ ಮಕ್ಕಳಿಗೆ ಟ್ಯೂಬ್ ಹಾಗೂ ಇತರ ಸುರಕ್ಷಿತ ಪರಿಕರಗಳನ್ನು ಬಳಸಿ ತರಬೇತಿ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈಜು ತರಬೇತಿಯ ಜೊತೆಗೆ,ಕೇಶವ ಅವರು ಮಕ್ಕಳಿಗೆ ಅಂಡರ್ ವಾಟರ್ ಸ್ವಿಮ್ಮಿಂಗ್,ಶವಾಸನ,ಚಕ್ರಾಸನ ಸೇರಿದಂತೆ ವಿವಿಧ ಯೋಗಾಸನಗಳನ್ನು ನೀರಿನಲ್ಲೇ ಮಾಡುವ ಕಲೆಗಳನ್ನು ಕಲಿಸಿಕೊಡುತ್ತಿದ್ದಾರೆ.ಒಂದು ತಿಂಗಳ ಈ ವಿಶೇಷ ಶಿಬಿರದಲ್ಲಿ ಸುಮಾರು 60 ರಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುತ್ತಿದ್ದು,ಬೆಂಗಳೂರು ಮತ್ತು ಕೋಲಾರ ಜಿಲ್ಲೆಯ ವಿವಿಧ ಭಾಗಗಳಿಂದಲೂ ಮಕ್ಕಳು ಆಗಮಿಸುತ್ತಿರುವುದು ವಿಶೇಷವಾಗಿದೆ.

ಕೇಶವ ಅವರ ಈ ಸಾಮಾಜಿಕ ಕಳಕಳಿಗೆ ಪೋಷಕರು ಮತ್ತು ಶಿಕ್ಷಕರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಮಕ್ಕಳು ತಮ್ಮ ಪ್ರಾಣವನ್ನು ತಾವೇ ರಕ್ಷಿಸಿಕೊಳ್ಳುವಂತಹ ಕೌಶಲಗಳನ್ನು ಕಲಿಯುತ್ತಿರುವುದು ಸಂತೋಷ ತಂದಿದೆ”ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ.

ಕೇಶವ ಅವರು ಮಾತನಾಡುತ್ತಾ ಪ್ರತಿ ವರ್ಷ ಬೇಸಿಗೆ ಶಿಬಿರದ ಮೂಲಕ ಮಕ್ಕಳಿಗೆ ಹೊಸ ಕೌಶಲಗಳನ್ನು ಕಲಿಸುವುದು ನಮ್ಮ ಉದ್ದೇಶ. ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಈಜು ಕಲಿಯಲು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಈಜು ಕಲಿಯಲು ಬಂದ ಮಕ್ಕಳ ಪೋಷಕರು ಮಾಧ್ಯಮದವರೊಂದಿಗೆ ಮಾತನಾಡಿ ನಮ್ಮ ಮಕ್ಕಳು ಕೇವಲ ಕೆಲವು ದಿನಗಳಲ್ಲೇ ಈಜನ್ನು ಕಲಿಯುತ್ತಿರುವುದು ಸಂತಸ ತಂದಿದೆ. ಕೇಶವ ಅಕಾಡೆಮಿಯ ಈ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದರು.

ಮಕ್ಕಳಿಗೆ ಬಾಲ್ಯದಲ್ಲೇ ಈಜು ಕಲಿಸುವುದು ಒಂದು ಸುರಕ್ಷತಾ ಕವಚವಿದ್ದಂತೆ.ಶಿಬಿರದ ಮೂಲಕ ಮಕ್ಕಳಿಗೆ ಈ ಜೀವರಕ್ಷಕ ಕಲೆಯನ್ನು ಕಲಿಸುತ್ತಿರುವುದು ನಮಗೆ ತೃಪ್ತಿ ನೀಡಿದೆ.

ಇದನ್ನು ಓದಿದ್ದೀರಾ..? ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

ಬೇಸಿಗೆಯ ರಜೆಯಲ್ಲಿ ಮಕ್ಕಳು ಕೇವಲ ಮೊಬೈಲ್ ಮತ್ತು ಟಿವಿಗಳಿಗೆ ಸೀಮಿತವಾಗದೆ,ದೈಹಿಕವಾಗಿ ಸದೃಢರಾಗಲು ಮತ್ತು ಸಂಭವನೀಯ ಅನಾಹುತಗಳಿಂದ ಪಾರಾಗಲು ಈಜು ಒಂದು ಅತ್ಯಗತ್ಯ ಕಲೆಯಾಗಿದೆ ಎಂಬ ಉದ್ದೇಶದಿಂದ ಈ ತರಬೇತಿಯನ್ನು ಪಡೆಯುತ್ತಿರುವದು ಸಂತೋಷವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...