ಚಿಂತಾಮಣಿ | ಬೀದಿಬದಿ ವ್ಯಾಪಾರಸ್ಥರ ತಾತ್ಕಾಲಿಕ ಮಾರಾಟ ಸಮಿತಿ ರಚನೆ: ಅಧ್ಯಕ್ಷರಾಗಿ ಅನ್ಸರ್ ಪಾಷಾ ಆಯ್ಕೆ

Date:

ಉದ್ಯಮ ಮಂಡಳಿ ಮತ್ತು ಜೀವನ ಉಪಯೋಗ ಇಲಾಖೆಯಿಂದ ಇಂದು ಚಿಂತಾಮಣಿ ಬೀದಿಬದಿ ವ್ಯಾಪಾರಸ್ಥರ ತಾತ್ಕಾಲಿಕ ಮಾರಾಟ ಸಮಿತಿ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಅನ್ಸರ್ ಪಾಷಾ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭಾ ಸಭಾಂಗಣದಲ್ಲಿ ಇಂದು ನಗರಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿಯನ್ನು ರಚನೆ ಮಾಡುವ ಸಲುವಾಗಿ ಇಂದು ನಗರಸಭೆ ಪೌರಾಯುಕ್ತ ಜಿ ಎನ್ ಚಲಪತಿ ಹಾಗೂ ಪಟ್ಟಣ ಮಾರಾಟ ಸಮಿತಿಯವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ ಆಯ್ಕೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಗರಸಭೆ ಪೌರಾಯುಕ್ತರ ಜಿ ಎನ್ ಚಲಪತಿಯವರು ಈ ವೇಳೆ ಮಾತನಾಡಿ, “ಉದ್ಯಮ ಮಂಡಳಿ ಮತ್ತು ಜೀವನ ಉಪಯೋಗ ಇಲಾಖೆಯಿಂದ ಸ್ಥಳೀಯ ಸಂಸ್ಥೆಗಳು ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿಯ ಆದೇಶದಂತೆ ನಾವು 12 ಗಂಟೆಗೆ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಅದರಂತೆ ಸದಸ್ಯರು ಬಂದಿದ್ದರು. ಈ ಹಿಂದೆ ಸೂಫಿ ಸಲೀಂ ಅಧ್ಯಕ್ಷರಾಗಿದ್ದರು. ಅವರೂ ಕೂಡ ಇಂದು ಸಭೆಗೆ ಗೈರು ಹಾಜರಾಗಿದ್ದರು. ಕೆಲವು ಸದಸ್ಯರೂ ಕೂಡ ಗೈರು ಹಾಜರಾಗಿದ್ದರು. ಅದರಂತೆ ಇಂದು ನೂತನವಾಗಿ ಅನ್ಸರ್ ಪಾಷಾ ಅಧ್ಯಕ್ಷರಾಗಿ ಮತ್ತು ಕೆಲ ಸದಸ್ಯರನ್ನು ತಾತ್ಕಾಲಿಕವಾಗಿ ಸಮಿತಿಯ ಸದಸ್ಯರನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶದಂತೆ ನಾವು ಚುನಾವಣೆ ನಡೆಸಿಸುತ್ತೇವೆ” ಎಂದು ಹೇಳಿದರು.

“ಈಗ ಆಯ್ಕೆಯಾಗಿರುವ ಅಧ್ಯಕ್ಷ ಮತ್ತು ಸದಸ್ಯರು ಕಮಿಟಿಯ ಎಲ್ಲ ಸದಸ್ಯರನ್ನೂ ಒಗ್ಗೂಡಿಸಿ ಸರ್ಕಾರದಿಂದ ಬರುವ ಸವಲತ್ತುಗಳ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

ನೂತನ ಸಮಿತಿಯ ಅಧ್ಯಕ್ಷರಾಗಿ ಅನ್ಸರ್ ಪಾಷಾ, ಸದ್ಯಸರಾಗಿ ರಾಣಿಯಮ್ಮ, ಸುಧಾಕರ್, ಇರ್ಫಾನ್, ಬಾಬು, ಮೋಹನ್ ಬಾಬು, ನಯಾಜ್, ರೇಷ್ಮಾ, ಪರ್ವೀನ್ ತಾಜ್ ಆಯ್ಕೆಗೊಂಡರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಣೇಶಮೂರ್ತಿ ಬಳಿ ಅಳವಡಿಸಿದ್ದ ವಿವಾದಿತ ಫ್ಲೆಕ್ಸ್‌ ತೆರವು: ಪೊಲೀಸರ ಕಾರ್ಯ ಯಶಸ್ವಿ

ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನ್ಸರ್ ಪಾಷಾ ಮಾತನಾಡಿ, “ಈಗ ನನ್ನನ್ನು ಆಯ್ಕೆ ಮಾಡಿರುವ ಎಲ್ಲ ಸದಸ್ಯರಿಗೂ ಕೃತಜ್ಞೆ ಸಲ್ಲಿಸುತ್ತೇನೆ. ಸರ್ಕಾರದಿಂದ ಬರುವ ಸವಲತ್ತುಗಳನ್ನು ಎಲ್ಲರಿಗೂ ಕೊಡಿಸುವ ಜವಾಬ್ದಾರಿ ನನ್ನ ಮೇಲಿದೆ. ನನ್ನನ್ನು ಅಧ್ಯಕ್ಷನಾಗಿ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರಾದ ಸುಧಾಕರ್ ಅವರಿಗೆ ನನ್ನ ಅಭಿನಂದನೆಗಳು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...