ಚಿಂತಾಮಣಿ | ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಮುಖ್ಯ: ಆರ್ ವೆಂಕಟಾಚಲಪತಿ

Date:

Advertisements

ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ 2019ರಲ್ಲಿ ಕುಂಬಾರರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪನೆ ಮಾಡಿದ್ದು, ಕಾರಣಾಂತರಗಳಿಂದ ಉದ್ಘಾಟನೆ ಮಾಡುವ ಅವಕಾಶ ಭಾಗ್ಯ ಒದಗಿಬಂದಿರಲಿಲ್ಲ. ಇಂದು ಸಂಘದ ಕಚೇರಿ ಹಾಗೂ ಸಂಘವನ್ನು ಉದ್ಘಾಟನೆ ಮಾಡಿದ್ದೇವೆ ಚಿಂತಾಮಣಿ ತಾಲೂಕು ಕುಂಬಾರರ ಕ್ಷೇಮಾಭಿವೃದ್ಧಿ ಅಧ್ಯಕ್ಷ ಆರ್ ವೆಂಕಟಚಲಪತಿ ಹೇಳಿದರು.

ಚಿಂತಾಮಣಿ ನಗರದ ಗ್ರಂಥಾಲಯ ಪಕ್ಕದಲ್ಲಿ ಇಂದು ನೂತನವಾಗಿ ತಾಲೂಕು ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

“ಸರ್ಕಾರದಿಂದ ಬರುವಂತಹ ಎಲ್ಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಲು ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕು, ಈಗಾಗಲೇ ತಾಲೂಕಿನ ದೊಡ್ಡಹಳ್ಳಿ ಸರ್ವೆ ನಂಬರ್ 13ರಲ್ಲಿ 3 ಗುಂಟೆ ಜಮೀನನ್ನು ಸರ್ಕಾರಿ ಅಧಿಕಾರಿಗಳು ಭವನ ನಿರ್ಮಾಣ ಮಾಡಿಕೊಳ್ಳಲು ಮಂಜೂರು ಮಾಡಿಕೊಟ್ಟಿದ್ದು, ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳು ಸಿಗುವಂತಹ ಕೆಲಸವನ್ನು ನಾವೆಲ್ಲರೂ ಮಾಡುತ್ತೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಕೆ ಎಂ ರೆಡ್ಡಪ್ಪ, ಉಪಾಧ್ಯಕ್ಷ ಗೋವಿಂದ, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಶಿವಶಂಕರ್, ವಗರಿ ಖಜಾಂಚಿ ಗೋವಿಂದರಾಜು, ಜಂಟಿ ಖಜಾಂಚಿ ಕೆ ನಾಗೇಶ್, ಆಂತರಿಕ ಲೆಕ್ಕ ಪರಿಶೋಧಕ ಮಂಜುನಾಥ್, ಪತ್ರಿಕಾ ಪ್ರತಿನಿಧಿ ಕೇಬಲ್ ನಾರಾಯಣ್, ನಿರ್ದೇಶಕರಾದ ವೆಂಕಟಸ್ವಾಮಿ, ವೆಂಕಟಲಕ್ಷ್ಮಮ್ಮ, ಮುನಿಸ್ವಾಮಿ, ರಮೇಶ್, ವೆಂಕಟಸ್ವಾಮಿ, ಶ್ರೀನಿವಾಸ್, ನಾಗಪ್ಪ, ಸೀನಪ್ಪ, ಆರ್ ಮಂಜು, ಮುರಳಿ, ಸರ್ವಜ್ಞ ಕವಿ ಸಲಹಾ ಸಮಿತಿ ಸದಸ್ಯ ಎನ್ ಅಂಬರೀಶ್, ಶಿವರಾಂ, ಕೃಷ್ಣಪ್ಪ, ತಿಮ್ಮಯ್ಯ ,ನಾರಾಯಣಸ್ವಾಮಿ, ಶ್ರೀ ರಾಮ್, ಗೋಪಾಲಕೃಷ್ಣಪ್ಪ, ಅಶ್ವಥ್ ನಾರಾಯಣ, ರಾಮಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X