ಚಿಂತಾಮಣಿ | ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ ಸರ್ಕಾರಿ ಅಧಿಕಾರಿಯ ವಿರುದ್ಧ ಕ್ರಮ ಯಾವಾಗ?

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದನ ಹೊಸಹಳ್ಳಿ ಗ್ರಾಮದ ಗ್ರಾಮ ಸಹಾಯಕ ಶ್ರೀನಿವಾಸ್ ಹಲವು ವರ್ಷಗಳ ಹಿಂದೆ ಅಂತ್ಯೋದಯ ಪಡಿತರ ಚೀಟಿ ಪಡೆದು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದ್ದರು. ಈ ಮೂಲಕ ಅವರು ಸರ್ಕಾರವನ್ನು ಮೋಸ ಮಾಡಿದ್ದರು.

- Advertisement -

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಶಿರಸ್ತೇದಾರ ನಟರಾಜ್ ರೆಡ್ಡಿ, ಈ ಘಟನೆ ಕುರಿತು ಕ್ರಮ ಕೈಗೊಂಡಿದ್ದು, ಅಂತ್ಯೋದಯ ಪಡಿತರ ಚೀಟಿಯನ್ನು ರದ್ದುಪಡಿಸಿದ್ದಾರೆ. ಆದರೆ, ಈ ಅವಧಿಯವರೆಗೆ ಶ್ರೀನಿವಾಸ್ ಪಡೆದ ಸರ್ಕಾರಿ ಸೌಲಭ್ಯಗಳ ಕುರಿತು ಯಾವುದೇ ರೀತಿಯ ಶಿಕ್ಷೆ ಅಥವಾ ದಂಡ ವಿಧಿಸದೆ ಈ ಪ್ರಕರಣವನ್ನು ಸದ್ದಿಲದೇ ಮುಗಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಾಮಾನ್ಯ ಜನರು ಇಂತಹ ತಪ್ಪುಗಳನ್ನು ಮಾಡಿದ್ದರೆ, ಅವರನ್ನು ಕಠಿಣವಾಗಿ ಶಿಕ್ಷೆಗೊಳಪಡಿಸುತ್ತಾರೆ ಎಂಬುದು ಬಹುತೇಕ ಸಾರ್ವಜನಿಕರ ಅಭಿಪ್ರಾಯವಾಗಿದೆ. ಈ ಪ್ರಕರಣದಲ್ಲಿ ವಿಶೇಷ ದಾಖಲಾತಿಗಳಿಲ್ಲದೇ ಹೀಗೆ ಮಾಡಿರುವುದು, ಅಧಿಕಾರಿಗಳು ಶ್ರೀನಿವಾಸ್ ಅವರನ್ನು ಏಕೆ ಸುಮ್ಮನೆ ಬಿಡುತ್ತಿದ್ದಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಇದೇ ವಿಚಾರವಾಗಿ ಕೆಆರ್ ಎಸ್ ಪಕ್ಷದ ಮುಖಂಡ ಅಬ್ದುಲ್ ಖಯ್ಯೂಮ್ ಪ್ರಾಮಾಣಿಕ ಪ್ರಯತ್ನ ಮಾಡಿ, ಸುದ್ದಿ ಬಯಲಿಗೆಳೆದಿದ್ದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ.

ಇದನ್ನು ಓದಿದ್ದೀರಾ? ಉಡುಪಿ | ಇತರ ಧರ್ಮದ ಬೋಧನೆ ತಿಳಿದುಕೊಂಡಾಗ ಗೌರವ ಹುಟ್ಟುತ್ತದೆ: ಫಾದರ್ ಡೆನ್ನಿಸ್ ಡೇಸಾ

ಇನ್ನೂ ಅಧಿಕಾರಿಯಾಗಿ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿದ್ದರೂ, ಪಡಿತರ ಚೀಟಿಯಲ್ಲಿ ಸದಸ್ಯರನ್ನು ಸೇರಿಸಿದ ಅಧಿಕಾರಿ ಇದನ್ನು ಗಮನಿಸಿಲ್ವಾ ಅಥವಾ ಯಾರೂ ಇದರ ಬಗ್ಗೆ ಮಾತನಾಡುವುದಿಲ್ಲ ಎಂದು ಬೇಜವಾಬ್ದಾರಿ ತೋರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...