ಹದಿಹರೆಯದ ಬಾಲಕ-ಬಾಲಕಿಯರು, ಯುವಜನರು ಕ್ಷುಲ್ಲಕ ಕಾರಣಗಳಿಗೆ ಆಘಾತಕಾರಿ ನಿರ್ಧಾರ ತೆಗೆದುಕೊಳ್ಳುವ ಜೀವವನ್ನೇ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ನಗರದಲ್ಲಿ ಘಟನೆ ನಡೆದಿದೆ. ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸ್ಪಂದನಾ (11) ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತನ್ನ ಗೆಳತಿ ನಿತ್ಯ ಸೈಕಲ್ ಸವಾರಿ ಮಾಡುತ್ತಿದ್ದಳು. ತನೂ ಸವಾರಿ ಮಾಡಲು, ಗೆಳತಿಯ ಬಳಿ ಬಾಲಕಿ ಸೈಕಲ್ ಕೇಳಿದ್ದಾಳೆ. ಆದರೆ, ಗೆಳತಿ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.