ಚಿತ್ರದುರ್ಗ | ಕಲುಷಿತ ನೀರು ಸೇವನೆಯಿಂದ 16 ಮಂದಿ ಅಸ್ವಸ್ಥ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

Date:

ಕಲುಷಿತ ನೀರು ಸೇವನೆಯಿಂದ 16ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಡೆದಿದೆ.

- Advertisement -

ನಾಗಸಮುದ್ರ ಗ್ರಾಮದಲ್ಲಿ ಬುಧವಾರ ತಡ ರಾತ್ರಿಯಿಂದ ಬಹುತೇಕರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ನಾಗಸಮುದ್ರ, ರಾಂಪುರ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಆಸ್ಪತ್ರೆಯಲ್ಲಿ ಕೆಲವರಿಗೆ ಚಿಕಿತ್ಸೆ ನೀಡಿದ್ದು, ಉಳಿದವರನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ. ಅಸ್ವಸ್ಥಗೊಂಡಿರುವವರ ಸಂಖ್ಯೆ ಹೆಚ್ಚಾದ ಕಾರಣ ಹಾಗೂ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಗ್ರಾಮದಲ್ಲಿ ಬಹುದಿನಗಳ ಹಿಂದೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದಿದ್ದು, ಚರಂಡಿ, ಗೊಬ್ಬರದ ಗುಂಡಿಗಳ ನೀರು ಸೇರಿಕೊಂಡಿದೆ. ಇದರಿಂದ ಕಲುಷಿತಗೊಂಡ ನೀರನ್ನು ಸೇವಿಸಿದ ಬಹಳಷ್ಟು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಮುಖಂಡ ಮರಿಸ್ವಾಮಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅವೈಜ್ಞಾನಿಕ ಕಾಮಗಾರಿಗಳು ಈ ರೀತಿಯ ಘಟನೆಗೆ ಕಾರಣವಾಗುತ್ತವೆ. ಗ್ರಾಮದಲ್ಲಿ 2ನೇ ವಾರ್ಡಿನಲ್ಲಿ ಚರಂಡಿ, ಗೊಬ್ಬರದಗುಂಡಿಗಳ ರಾಶಿಯ ಮಧ್ಯೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್‌ಗಳನ್ನು ಅಳವಡಿಸಿದ್ದು ಈ ಘಟನೆಗೆ ಕಾರಣವಾಗಿದೆ” ಎಂದು ಆರೋಪಿಸಿದರು.

“ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಹಲವು ಬಾರಿ ಎಚ್ಚರಿಸಿದ್ದರೂ ಎಚ್ಚೆತ್ತುಕೊಂಡಿಲ್ಲ. ಪೈಪ್‌ ಹಾನಿಯಾಗಿರುವ ಕುರಿತು ಕ್ರಮ ತೆಗೆದುಕೊಳ್ಳದೆ, ಅದೇ ಪೈಪ್ ಲೈನ್‌ನಲ್ಲಿ ನೀರು ಸರಬರಾಜು ಮಾಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷದಿಂದ ಕೊಳಚೆ ನೀರು ಕುಡಿಯುವ ನೀರಿಗೆ ಸೇರಿದ್ದು, ಅನಾಹುತಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಕುಡಿಯುವ ನೀರು ಸರಬರಾಜು ಮಾರ್ಗವನ್ನು ಬೇರೆಡೆಗಡ ಸ್ಥಳಾಂತರಿಸಿ ಗ್ರಾಮಸ್ಥರ ಆರೋಗ್ಯ ಕಾಪಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ಗ್ರಾಮದ ಪಂಚಾಯತ್ ಸದಸ್ಯ ಆನಂದ್ ಮಾತನಾಡಿ, “ನಾಗಸಮುದ್ರ ಗ್ರಾಮ ದೊಡ್ಡದಿದೆ. ಇದು ಗ್ರಾಮ ಪಂಚಾಯಿತಿಯ ಗಮನಕ್ಕೆ ಬಂದಿರಲಿಲ್ಲ. ಇಷ್ಟು ಸಂಖ್ಯೆಯ ಪ್ರಕರಣ ಕಂಡುಬಂದಿರುವುದರಿಂದ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದಾರೆ. ಎಲ್ಲರೂ ಸೇರಿ ಕಲುಷಿತ ನೀರಿಗೆ ಕಾರಣ ಏನೆಂದು ಗುರುತಿಸಿ ಸರಿಪಡಿಸುವ ಕೆಲಸವನ್ನು ಇಂದೇ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಕಲುಷಿತ ನೀರು ಕುಡಿದು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ “ತಾಲೂಕು ಆರೋಗ್ಯ ಅಧಿಕಾರಿ ಮತ್ತು ಜಿಲ್ಲಾಡಳಿತದ ಇತರೆ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿದ್ದು, ಎಲ್ಲರ ನೇತೃತ್ವದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಬೇರೆಡೆಗೆ ವರ್ಗಾಯಿಸುವ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

“ನಾಗಸಮುದ್ರ ಮತ್ತು ರಾಂಪುರ ಆಸ್ಪತ್ರೆಯಲ್ಲಿರುವ ಅಸ್ವಸ್ಥರು ಚೇತರಿಸಿಕೊಂಡಿದ್ದು, ಆರು ಮಂದಿ ಮನೆಗೆ ಹಿಂತಿರುಗಿದ್ದಾರೆ. ಇನ್ನೂ ನಾಲ್ವರು ರಾಂಪುರ ಆಸ್ಪತ್ರೆಯಲ್ಲಿದ್ದು, ಇಬ್ಬರು ಅಸ್ವಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...