ಚಿತ್ರದುರ್ಗ | ಏ.23 ಕಾಂಗ್ರೆಸ್‌ ಬಹಿರಂಗ ಸಭೆ; ಬಿ.ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ ಪ್ರಿಯಾಂಕಾ ವಾದ್ರಾ

Date:

ಈ ಬಾರಿ ಚಿತ್ರದುರ್ಗ ಕ್ಷೇತ್ರದಾದ್ಯಂತ ಭಾರೀ ಕಾಂಗ್ರೆಸ್ ಅಲೆ ಇದ್ದು, ಬೇರೆ ಯಾವ ಅಲೆಗಳಿಲ್ಲ. ಈ ಬಾರಿ ನಮ್ಮ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

- Advertisement -

ಚಿತ್ರದುರ್ಗದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ಭಾಗ್ಯಗಳಿಂದ ಸಂತೋಷವಾಗಿದ್ದಾರೆ. ನಮಗೆ ಈ ಸರ್ಕಾರ ಬೇಕು ಎಂದು ಹೇಳುತ್ತಿದ್ದಾರೆ. ಮೋದಿ ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವಂತ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಹಿಂದು ಮುಸ್ಲಿಂ ಧರ್ಮದ ಮೇಲೆ ರಾಜಕಾರಣ ಮಾಡದೇ, ಬಡವರಿಗೆ, ರೈತರಿಗೆ ಯುವ ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿ, ಇದು ಬಿಟ್ಟು ಹಳೆ ಯೋಜನೆಗಳನ್ನು ಚಾಲ್ತಿ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ, ದೇಶದ ಭದ್ರತೆಯನ್ನು ಕಾಂಗ್ರೆಸ್ ಮಾಡಿದೆ, ಇದನ್ನು ನೀವು ನೋಡಿಕೊಂಡರೆ ಸಾಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜನರ ಮತ ಕೇಳುವ ನೈತಿಕ ಹಕ್ಕುಬಿಜೆಪಿಯವರಿಗೆ ಇಲ್ಲ. ನಾವು ಚುನಾವಣೆ ಪೂರ್ವದಲ್ಲಿ ಕೊಟ್ಟಿದ್ದ ಭರವಸೆಯಂತೆ ನುಡಿದಂತೆ ನಡೆದಿದ್ದೇವೆ. ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ. ಇಂದಿರಾ ಗಾಂಧಿಯ ರೀತಿಯಲ್ಲಿ ರಾಷ್ಟ್ರದ ಗಮನ ಸೆಳೆಯುತ್ತಿರುವ ಪ್ರಿಯಾಂಕ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು, ಇದೇ 23 ರಂದು ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆಯಲ್ಲಿ ಬಿ.ಎನ್. ಚಂದ್ರಪ್ಪ ಅವರ ಪರ ಮತಯಾಚನೆ ಮಾಡಲಿದ್ದಾರೆ ಎಂದರು.

ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬಂದು ಭಾಗವಹಿಸಬೇಕೆಂದು ಮನವಿ ಮಾಡಿದರು. ಜಿಲ್ಲೆಯಲ್ಲಿ ನಮ್ಮದೆ ಸಂಪ್ರಾದಾಯಿಕ ಮತಗಳಿವೆ, ಅವುಗಳ ಜೊತೆಗೆ ತಪ್ಪಾಗಿದ್ದರೆ, ಸರಿಪಡಿಸಿಕೊಂಡು ಮುನ್ನೆಡೆಯುತ್ತೇವೆ ಎಂದರು.

ಇದೇ ಸಮಯದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಚಿತ್ರದುರ್ಗ ನಗರಸಭೆಯ ಕಾಂಗ್ರೆಸ್ ನ ಯಾವ  ಸದಸ್ಯರೂ ಕೂಡ ಬಿಜೆಪಿಗೆ ಸೇರಿಲ್ಲ. ಇನ್ನು ಬಿಜೆಪಿಯವರು ಆರೋಪಿಸಿದಂತೆ ಗ್ಯಾರಂಟಿ ಕಾರ್ಡ್ ನೀಡುವಾಗ ಯಾವುದೇ ಚುನಾವಣೆ ಅಕ್ರಮ ಮಾಡಿಲ್ಲ. ಫಲಾನುಭವಿಗಳ ಹೆಸರು ಬರೆದುಕೊಳ್ಳಲು ಆಧಾರ್ ಕಾರ್ಡ್ ತೆಗೆದುಕೊಂಡು ವಾಪಾಸ್ಸು ನೀಡಲಾಗಿದೆ. ಇನ್ನು ಸ್ಥಳೀಯ ಶಾಸಕರಾದ ವೀರೇಂದ್ರ ಪಪ್ಪಿ ಅವರು ಹಾಗೂ ಕಾರ್ಯಕರ್ತರು, ಮನೆ ಮನೆಗೂ ಭೇಟಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಮುಖಂಡ ಕೃಷ್ಣಮೂರ್ತಿ, ಸಂಪತ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ನರಸಿಂಹ ಮೂರ್ತಿ, ಲಿಡ್ಕರ್ ಮಾಜಿ ಅಧ್ಯಕ್ಷ ಶಂಕರ್, ಡಿ.ಎನ್. ಮೈಲಾರಪ್ಪ, ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...