ಚಿತ್ರದುರ್ಗ | ಲಾರಿ – ಕಾರು ನಡುವೆ ಮುಖಾಮುಖಿ ಡಿಕ್ಕಿ; ನಾಡೋಜ ಬೆಳಗಲ್ಲು ವೀರಣ್ಣ ಸಾವು

Date:

  • ಕಾರಿನಲ್ಲಿದ್ದ ವೀರಣ್ಣ ಪುತ್ರ ಹನುಮಂತಪ್ಪ ಸ್ಥಿತಿ ಗಂಭೀರ
  • ತಳಕು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು

ಬಳ್ಳಾರಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ಕಾರಿಗೆ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹಿರಿಯ ಜನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ (91) ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿ, ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಬೆಳಗಲ್ಲು ವೀರಣ್ಣ ಗಂಭೀರ ಸ್ವರೂಪದ ಗಾಯವಾಗಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? : ದಕ್ಷಿಣ ಕನ್ನಡ | ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ; ಹೋಮ್‌ ನರ್ಸ್‌ ಬಂಧನ

ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ವೀರಣ್ಣ ಅವರ ಪುತ್ರ ಹನುಮಂತಪ್ಪ ಅವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯಲ್ಲಿ ದೇಶ-ವಿದೇಶಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪದವಿ, ಕರ್ನಾಟಕ ರಾಜ್ಯೋತ್ಸವ ಪದವಿ, ಜಾನಪದ ಅಕಾಡೆಮಿ ಪದವಿ ಸೇರಿದಂತೆ ಹಲವು ಪ್ರಶಸ್ತಿಗೆ ಪುರಸ್ಕೃತರಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...

ಮಂಡ್ಯ | ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ : ಸಚಿವ ಎನ್ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಜಿಲ್ಲೆಯ...

ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...