ಚಿತ್ರದುರ್ಗ | ರೈತರ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕೋಶದ ಅಗತ್ಯವಿದೆ: ರೈತ ಸಂಘದ ಉಪಾಧ್ಯಕ್ಷ ಹೊರಕೇರಪ್ಪ

Date:

Advertisements

ರೈತಾಪಿ ಸಮುದಾಯ ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳೆಹಾನಿ ಪರಿಶೀಲನೆ, ನಷ್ಟ ಅಂದಾಜು ಹಾಗೂ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಶಾಶ್ವತ ಕೋಶ ಒಂದನ್ನು ರಚಿಸುವ ಅಗತ್ಯವಿದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಹೊರಕೇರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬೆಳೆಹಾನಿ ಪರಿಶೀಲನೆಗೆ ಶಾಶ್ವತ ಕೋಶ ರಚಿಸುವ ಕುರಿತು ಒತ್ತಾಯಿಸಿ ರಾಜ್ಯ ರೈತ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.

“ಚಿತ್ರದುರ್ಗ ಜಿಲ್ಲೆ ಶಾಶ್ವತ ಬರಪೀಡಿತ ಪ್ರದೇಶವಾಗಿದ್ದು, ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದಾರೆ. ಹವಾಮಾನ ವೈಪರಿತ್ಯಗಳು ರೈತರ ಬದುಕಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತಿವೆ. ಹಾಗಾಗಿ ಸೂಕ್ತ ಪರಿಹಾರಕ್ಕೆ ಶಾಶ್ವತ ವೇದಿಕೆ ಒದಗಿಸುವುದು ಅನಿವಾರ್ಯ. ಇದರಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ವಿಮಾಕಂಪನಿ ಅಧಿಕಾರಿಗಳು ಇರಬೇಕು. ಇದಕ್ಕಾಗಿ ಪ್ರತ್ಯೇಕ ಕಚೇರಿ ತೆರೆದು ಮುಂಗಾರು ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿ ಆದಾಗ ಕೋಶವು ಕಾರ್ಯಪಡೆ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ರೈತರಿಂದ ಬಂದ ದೂರುಗಳನ್ನು ಆಲಿಸಿ ಕೂಡಲೇ ಫೀಲ್ಡ್‌ಗೆ ಹೊಗಬೇಕು. ಅಲ್ಲದೆ ತಮ್ಮದೇ ಆದ ನೆಟ್‌ವರ್ಕ್ ಮೂಲಕ ಬೆಳೆನಷ್ಟ ಅಂದಾಜಿಸುವ ವ್ಯವಸ್ಥೆ ಇರಬೇಕು. ರೈತರ ಸಹಾಯವಾಣಿ ರೀತಿ ಈ ಕೋಶ ಕಾರ್ಯ ನಿರ್ವಹಸಬೇಕು” ಎಂದು ತಿಳಿಸಿದರು.

Advertisements

“ಬೆಳೆ ಪರಿಹಾರ ವಿತರಣೆ ಸಂಬಂಧ ರೈತ ಸಂಘಟನೆಗಳು ಈಗಾಗಲೇ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿವೆ.‌ ಪರಿಹಾರ ವಿತರಣೆಯಲ್ಲಿನ ತಾಂತ್ರಿಕ ಲೋಪ ಹಾಗೂ ತಪ್ಪು ನಡೆಯಿಂದಾಗಿ ಬಹಳಷ್ಟು ರೈತರ ಪಾಲಿಗೆ ಪರಿಹಾರ ಎಂಬುದು ಮರೀಚಿಕೆಯಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಆದ ಲೋಪದಿಂದಾಗಿ ಪರಿಹಾರ ವಿತರಣೆಯಾಗಿಲ್ಲ. ಜಿಲ್ಲಾಡಳಿತ ಬೆಳೆ ನಷ್ಟದ ಬಗ್ಗೆ ಪುನರ್ ಪರಿಶೀಲಿಸಿ ತಕ್ಷಣವೇ ಪರಿಹಾರ ವಿತರಿಸಬೇಕು. ಯಾವೊಬ್ಬ ರೈತನೂ ಬೆಳೆನಷ್ಟ ಪರಿಹಾರದ ವ್ಯಾಪ್ತಿಯಿಂದ ಹೊರಗಿರದಂತೆ ನೋಡಿಕೊಳ್ಳಬೇಕು‌” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

“ಬೆಸ್ಕಾಂನವರು ನಿತ್ಯ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳಿ ಕೆಲವು ಕಡೆ ಆರು, ನಾಲ್ಕು ತಾಸು ವಿದ್ಯುತ್‌ ಪೂರೈಕೆ ಮಾಡುತ್ತಿದ್ದಾರೆ. ಇದರಿಂದಾಗಿ ಬೇಸಿಗೆ ಫಸಲು ಬೆಳೆಯಲು ತೊಂದರೆಯಾಗಿದೆ. ತಕ್ಷಣವೇ ಏಳು ತಾಸು ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣದಿಂದ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಬಾರದು. ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಜಿಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ, ವಿದ್ಯುತ್, ವಿಮಾ ಅಧಿಕಾರಿಗಳೊಂದಿಗೆ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ, ಮುಖಂಡರಾದ ಲಕ್ಷ್ಮೀಕಾಂತ, ಶಿವಕುಮಾರ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಚೇತನ್ ಯಳನಾಡು ಸೇರಿದಂತೆ ಬಹುತೇಕ ರೈತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X