ಚಿತ್ರದುರ್ಗ | ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯರ್ತೆಯರ ಪ್ರತಿಭಟನೆ

Date:

ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್‌ನಿಂದ ಮೆರವಣಿಗೆ ಮೂಲಕ ಜಿಲ್ಲಾಡಳಿತ ಕಛೇರಿಗೆ ಸಾಗಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರವನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ ಬಾಬು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಜನ ಪರವಾಗಿದ್ದರೂ ವಿವಿಧ ಯೋಜನೆಗಳಲ್ಲಿ ಸ್ಕೀಂ ವರ್ಕರ್ಸ್ ಗಳಾಗಿ ದುಡಿಯುತ್ತಿರುವ ಮಹಿಳಾ ಸಮುದಾಯವನ್ನು ಕಡೆಗಣಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿನ ನಾಯಕಿ ಪ್ರಿಯಾಂಕ ಗಾಂಧಿ ಅಂಗನವಾಡಿ ಕಾರ್ಯಕರ್ತರಿಗೆ 15ಸಾವಿರ ರೂ. ಹಾಗೂ ಸಹಾಯಕಿಯರಿಗೆ 10ಸಾವಿರ ರೂ.ಗಳ ಗೌರವಧನವನ್ನು, ಆರನೇ ಗ್ಯಾರಂಟಿ ಎಂದು ನೀಡುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಗೌರವ ಧನ ಸಿಗುತ್ತಿಲ್ಲ. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಇಡಿ ಗಂಟು ಮೂರು ಲಕ್ಷ ರೂ.ಗಳನ್ನು ಕೊಡಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಮೂರು ಸಾವಿರದ ಐದುನೂರು ಹಾಗೂ ರಾಜ್ಯ ಸರ್ಕಾರ 8500 ರೂ.ಗಳನ್ನು ಕೊಡುತ್ತಿದೆ. ಇದರಿಂದ ಜೀವನ ಮಾಡೋದು ಕಷ್ಟ ಯಾವುದೇ ಭದ್ರತೆ ಇಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ದುಡಿಯುತ್ತಿದ್ದಾರೆ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸ್ಕೀಂ ವರ್ಕರ್ಸ್ ಗಳ ಗೌರವ ಧನ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಜಿಲ್ಲಾಧ್ಯಕ್ಷೆ ಎಸ್. ಭಾಗ್ಯಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮುನಾ ಬಾಯಿ, ಖಜಾಂಚಿ ವಿನೋದಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ಸಾವಿತ್ರಮ್ಮ, ರಾಧಮ್ಮ, ರತ್ನಮ್ಮ ಎಐಟಿಯುಸಿ ತಾಲೂಕು ಕಾರ್ಯದರ್ಶಿ, ಸತ್ಯ ಕೀರ್ತಿ ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...