ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

Date:

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು.

ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರೊ.ಬಿ ಕೃಷ್ಣಪ್ಪ ಅವರ 86ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾಮಾಜಿಕ ರಕ್ಷಣೆಗಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಸ್ತ್ರವನ್ನು ಶೋಷಿತರ ಕೈಗೆ ನೀಡಿದ ಕೀರ್ತಿ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ” ಎಂದು ಹೇಳಿದರು.

“1970ರ ದಶಕದಲ್ಲಿನ ಮೌಢ್ಯಾಚರಣೆ ಹೆಸರಿನಲ್ಲಿ ಶೋಷಿತರ ಶೋಷಣೆ, ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ದಲಿತರ ಭೂ ಕಬಳಿಕೆ ಪ್ರಕರಣಗಳಿಗೆ ಹೋರಾಟದ ಶಕ್ತಿಯಾಗಿ ನಿಂತವರು ಕೃಷ್ಣಪ್ಪ. ಅಂಬೇಡ್ಕ‌ರ್ ಅವರ ವಿಚಾರಧಾರೆಯಿಂದ ಪ್ರೇರಿತರಾಗಿದ್ದ ಕೃಷ್ಣಪ್ಪ, ರಾಜ್ಯದಲ್ಲಿ ದಸಂಸ ಸಂಘಟನೆ ಕಟ್ಟುವ ಮೂಲಕ ದಲಿತ ಮತ್ತು ಶೋಷಿತ ಸಮುದಾಯಕ್ಕೆ ಸಾಮಾಜಿಕ ರಕ್ಷಣೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

“ಕೃಷ್ಣಪ್ಪ ಅವರ ಆದರ್ಶ ಮತ್ತು ಹೋರಾಟದ ದೃಷ್ಟಿಕೋನವನ್ನು ಉಳಿಸಿಕೊಳ್ಳುವ ಜವಬ್ದಾರಿ ದಲಿತರ ಮೇಲಿದೆ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೌಲಭ್ಯ ಮತ್ತು ಒಡೆತನವನ್ನು ಧಕ್ಕಿಸಿಕೊಳ್ಳಲು ಹೋರಾಟವೇ ಪ್ರಮುಖ ಅಸ್ತ್ರ. ಹಾಗಾಗಿ ಹಲವು ಸಂಘಟನೆಗಳು ಒಗ್ಗೂಡಿ ಹೋರಾಟದ ಶಕ್ತಿಯನ್ನು ಗಟ್ಟಿಗೊಳಿಸಿಕೊಳ್ಳಬೇಕಾಗಿದೆ” ಎಂದರು.

ಕೆ ಬಿ ನಾಗರಾಜ್, ಅಂಜಿನಪ್ಪ, ಚನ್ನಿಗರಾಮಯ್ಯ, ಎನ್ ತಿಪ್ಪೇರುದ್ರಪ್ಪ, ಜಾಲಿ ಮಂಜು, ಎನ್ ಹೊನ್ನೂರಸ್ವಾಮಿ, ಡಿ.ಸೋಮಶೇಖರ್, ಹಳೇಟೌನ್ ಬದ್ರಿ, ಆರ್ ರುದ್ರಮುನಿ, ಜಗದೀಶ, ನಿಂಗರಾಜ್‌, ಡಿ ತಿಪ್ಪೇಸ್ವಾಮಿ, ಮಹಾಂತೇಶ್, ಎ ಮಾರುತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು...