ಚಿತ್ರದುರ್ಗ | ಹಸುವಿನ ಮರಣೋತ್ತರ ಪರೀಕ್ಷಾ ವರದಿ ನೀಡಲು ಲಂಚ; ಪಶುವೈದ್ಯಾಧಿಕಾರಿ ಬಂಧನ

Date:

ಮೃತಪಟ್ಟಿದ್ದ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿಯನ್ನು ಹೊಳಲ್ಕೆರೆಯಲ್ಲಿ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.

- Advertisement -

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಪಶುವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಕಾಗಳಗೇರಿ ಗ್ರಾಮದ ರೈತ ಎಸ್‌ ಸ್ವಾಮಿ ಅವರಿಂದ ಆರು ಸಾವಿರ ರೂ. ಲಂಚ ಪಡೆಯುತ್ತಿದ್ದರು. ಆ ವೇಳೆ ತಿಪ್ಪೇಸ್ವಾಮಿ ಅವರನ್ನು ಸಾಕ್ಷ್ಯ ಸಮೇತ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸ್ವಾಮಿ ಅವರು ಸಾಕಿದ್ದ ಎಚ್‌ಎಫ್‌ ತಳಿಯ ಹಸು ಮೇ 19ರಂದು ಸಾವನ್ನಪ್ಪಿತ್ತು. ಅವರು ಆ ಹಸುವಿಗೆ ವಿಮೆ ಮಾಡಿಸಿದ್ದರಿಂದ, ವಿಮೆ ಪರಿಹಾರ ಪಡೆಯಲು ಹಸುವಿನ ಮರಣೊತ್ತರ ಪರೀಕ್ಷೆ ಮಾಡಿಸಿದ್ದರು. ಚಿಕ್ಕಜಾನೂರು ಪಶು ಆಸ್ಪತ್ರಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದರು.

ಮರಣೋತ್ತರ ಪರೀಕ್ಷೆಯ ವರದಿ ನೀಡಲು ಸ್ವಾಮಿ ಅವರ ಬಳಿ ಪಶುವೈದ್ಯಾಧಿಕಾರಿ ಡಾ ತಿಪ್ಪೇಸ್ವಾಮಿ ಏಳು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪರೀಕ್ಷೆ ನಡೆಸಿದ ದಿನವೇ ಒಂದು ಸಾವಿರ ರೂ. ಪಡೆದಿದ್ದರು. ವರದಿ ನೀಡುವ ದಿನ ಉಳಿದ ಆರು ಸಾವಿರ ರೂ. ನೀಡಬೇಕೆಂದು ಹೇಳಿದ್ದರು.

ವೈದ್ಯಾಧಿಕಾರಿ ನಡೆಯಿಂದ ಸಿಟ್ಟಾಗಿದ್ದ ಸ್ವಾಮಿ, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಲೋಕಾಯುಕ್ತ ಪೊಲೀಸರು ಸ್ವಾಮಿ ಅವರನ್ನು ಮುಂದೆ ಕಳಿಸಿ ಲಂಚ ನೀಡುವಂತೆ ಹೇಳಿದ್ದರು. ಅವರು ಲಂಚ ನೀಡುವಾಗ ದಾಳಿ ನಡೆಸಿ, ಡಾ. ತಿಪ್ಪೇಸ್ವಾಮಿ ಅವರನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...