ಚಿತ್ರದುರ್ಗ | ಶಾಸಕ ಎಂ ಚಂದ್ರಪ್ಪ ಜೊತೆ ಬಿ.ಎಸ್‌ ಯಡಿಯೂರಪ್ಪ ಚರ್ಚೆ; ಬಂಡಾಯ ಶಮನ

Date:

ಚಿತ್ರದುರ್ಗ ಪರಿಶಿಷ್ಟ ಜಾತಿ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಪುತ್ರ ಎಂ.ಸಿ.ರಘುಚಂದನ್‌ ಬಂಡಾಯವೆದ್ದಿದ್ದರು.

ಟಿಕೆಟ್ ತಪ್ಪಿಸಲು ಯಡಿಯೂರಪ್ಪನವರೇ ಕಾರಣ ಎಂದು ಆರೋಪಿಸಿದ್ದರು. ಪಕ್ಷೇತರವಾಗಿ ಸ್ಪರ್ಧಿಸಲು ಸಹ ಸಕಲ ಸಿದ್ಧತೆ ನಡೆಸಿದ್ದರು. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಬಂಡಾಯ ಶಮನಗೊಳಿಸಿದ್ದಾರೆ.

ಸೋಮವಾರ (ಏ.1) ಸಂಜೆ ಬೆಂಗಳೂರಿಗೆ ಪುತ್ರನನ್ನು ಕರೆದುಕೊಂಡು ಬರುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶಾಸಕ ಎಂ.ಚಂದ್ರಪ್ಪ ತಿಳಿಸಿದ್ದಾರೆ. ಕೂಡಲೇ ಪುತ್ರ ಹಾಗೂ ಬೆಂಬಲಿಗರ ಜತೆ ಬೆಂಗಳೂರಿಗೆ ತೆರಳಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಂದ್ರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಯಡಿಯೂರಪ್ಪ ನಿವಾಸದಲ್ಲಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಚಂದ್ರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಹಾಗೂ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪುತ್ರ ರಘುಚಂದನ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ಮತ್ತು ವಿಜಯೇಂದ್ರ ನಮಗೆ ಯಾವತ್ತೂ ಅನ್ಯಾಯ ಮಾಡಿದವರಲ್ಲ. ಅವರು ನನ್ನೊಂದಿಗೆ ಮತ್ತು ಬೆಂಬಲಿಗರ ಜೊತೆ ಮಾತಾಡಿದ್ದಾರೆ. ಅವರ ಮಾತಿಗೆ ಗೌರವ ಕೊಟ್ಟು ನನ್ನ ಮಗ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಿಲ್ಲ. ನಾವು ಬಿಜೆಪಿ ಪರ ಕೆಲಸ ಮಾಡುತ್ತೇವೆ. ಅದು ಅನಿವಾರ್ಯ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಭಾಗಿಯಾಗುತ್ತೇವೆ. ಪುತ್ರ ರಘುಚಂದನ್‌ಗೆ ಮುಂದೆ ಉತ್ತಮ ಅವಕಾಶ ನೀಡುವ ವಿಶ್ವಾಸ ಇದೆ ಎಂದು ಶಾಸಕ ಚಂದ್ರಪ್ಪ ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ತಂದೆ ಸ್ಥಾನದಲ್ಲಿದ್ದಾರೆ, ಅವರ ಮಾತನ್ನು ಕೇಳುತ್ತೇವೆ. ಅವರ ನೆರಳಲ್ಲೇ ರಾಜಕೀಯಕ್ಕೆ ಬಂದಿದ್ದೇವೆ. ಸಾಹೇಬರನ್ನು ನಂಬಿ ಕೆಜೆಪಿ ಕಟ್ಟಿದಾಗ, ಮತ್ತೆ ಬಿಜೆಪಿಗೆ ಬಂದಾಗ ಅಚಲವಾಗಿ ನಿಂತಿದ್ದೆವು. ಬಿಜೆಪಿ ಅಭ್ಯರ್ಥಿಗೆ ನಾವು ಬೆಂಬಲ ಕೊಡುವ ತೀರ್ಮಾನ ಮಾಡಿದ್ದೇವೆ. ನರೇಂದ್ರ ಮೋದಿ ಕೈಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ, ಎಂದು ರಘುಚಂದನ್‌ ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...