ಚಿತ್ರದುರ್ಗ | ಬೆಂಗಳೂರಿನಿಂದ ತೆರಳುತ್ತಿದ್ದ ಸ್ಲೀಪರ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ: 9 ಮಂದಿ ಸಜೀವ ದಹನ

Date:

ಚಿತ್ರದುರ್ಗದ ಸಮೀಪದಲ್ಲಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ

- Advertisement -

ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ 9 ಜನ ಸಜೀವ ದಹನವಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ.

ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದ್ದು ಡಿವೈಡರ್​ ದಾಟಿ ಬಂದು ಡಿಕ್ಕಿ ಹೊಡೆದಿದೆ.

ಸದ್ಯದ ಮಾಹಿತಿ ಪ್ರಕಾರ 9 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮೃತರೆಲ್ಲರೂ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದವರೇ ಆಗಿದ್ದು, ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿರುವುದಾಗಿ ವರದಿಯಾಗಿದೆ. ಮೃತಪಟ್ಟವರ ವಿವರಗಳು ಇನ್ನಷ್ಟೇ ಸಿಗಬೇಕಿದೆ.

ಬಸ್ ಅಪಘಾತದಲ್ಲಿ ಬದುಕಿರುವ ಚಾಲಕ ಮೊಹಮ್ಮದ್ ರಫೀಕ್ ಹೇಳಿಕೆ ನೀಡಿದ್ದು, ನಾನು ಚಾಲನೆ ಮಾಡುವಾಗ ವೇಗವಾಗಿ ಲಾರಿ ಬಂತು. ಅದನ್ನ ತಪ್ಪಿಸಲು ನಾನು ಹೋದಾಗ ಪಕ್ಕದಲ್ಲಿ ಇನ್ನೊಂದು ಬಸ್ ಬಂತು.‌ಲಾರಿಯವನು ನೇರವಾಗಿ ಡಿಸೇಲ್ ಟ್ಯಾಂಕಿಗೆ ಬಂದು ಗುದ್ದಿದ್ದಾನೆ. ಇದರಿಂದಾಗಿ ಬೆಂಕಿ ಉಂಟಾಗಿದೆ. ನನಗೆ ಆ ಕ್ಷಣದಲ್ಲಿ ಏನು ಆಯ್ತು ಅಂತ ಗೊತ್ತಾಗಲಿಲ್ಲ” ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಹೇಳಿಕೆ ನೀಡಿದ್ದಾರೆ.

1068034
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...