ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಘೋಷಣೆ; ಅನುದಾನ ಬಿಡುಗಡೆಗೆ ರೈತ ಸಂಘ ಆಗ್ರಹ

Date:

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ ₹5,300 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ತಿಂಗಳಿಂದ ಧರಣಿ ನಡೆಸುತ್ತಿರುವ ರಾಜ್ಯ ರೈತ ಸಂಘದ ಕಾರ್ಯಕರ್ತರು ಬುಧವಾರ ಟ್ರ್ಯಾಕ್ಟರ್‌ನೊಂದಿಗೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ ದಿಗ್ಬಂಧನ ವಿಧಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಕಚೇರಿ ಸುತ್ತ ಟ್ರ್ಯಾಕ್ಟರ್ ನಿಲ್ಲಿಸಿದ ರೈತರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೊಲೀಸರು ದಿಗ್ಬಂಧನ ತೆರವಿಗೆ ಮುಂದಾದರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು.

ಬುಧವಾರ ಬೆಳಿಗ್ಗೆ ಟ್ರ್ಯಾಕ್ಟರ್ ಮೂಲಕ ಧಾವಿಸಿದ ರೈತರು ಜಿಲ್ಲಾ ಪಂಚಾಯಿತಿ ಪ್ರವೇಶ ದ್ವಾರ ಹಾಗೂ ಕಾಂಪೌಂಡ್ ಸುತ್ತ ನಿಲುಗಡೆ ಮಾಡಿದರು. ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ದಿಶಾ ಸಭೆಗೆ ಪ್ರವೇಶ ನೀಡುವುದಿಲ್ಲ” ಎಂದು ಪಟ್ಟು ಹಿಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ ಪೊಲೀಸರು, ರೈತರ ಮನವೊಲಿಸಲು ಮುಂದಾದರು. ವಾಹನಗಳಿಗೆ ಅಡ್ಡ ಮಲಗಿದ ರೈತರನ್ನು ಎಳೆದು ಹಾಕಿ ಟ್ರ್ಯಾಕ್ಟರ್‌ಗಳನ್ನು ತೆರವುಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ; ಪ್ರೊ. ಪಿ.ಜಿ. ತಡಸದ

“ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ. ಕಾಮಗಾರಿಗೆ ವೇಗ ನೀಡಲು ರಾಜ್ಯ ಸರ್ಕಾರ ಕೂಡ ಸ್ಪಂದಿಸುತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸೋಣ” ಎಂದು ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...