ಚಿತ್ರದುರ್ಗ | ಕೇಂದ್ರ ಸರ್ಕಾರದ ಹೊಸ ನಿಯಮಗಳಿಂದ ಮನರೇಗಾ ಕಾರ್ಮಿಕರ ಹಕ್ಕು ದಮನ

Date:

ಕೇಂದ್ರ ಸರ್ಕಾರದ ಹೊಸ ನಿಯಮಗಳಿಂದ ಮನರೇಗಾ ಕಾರ್ಮಿಕರ ಕೆಲಸದ ಹಕ್ಕನ್ನು ದಮನಗೊಳಿಸುತ್ತಿದೆ. ಮನರೇಗಾದಲ್ಲಿ ನೂರು ದಿನಗಳ ಬದಲಿಗೆ 200 ದಿನಗಳ ದಿನಗೂಲಿ ಕೆಲಸದ ಖಾತರಿ ಮತ್ತು ಸಮರ್ಪಕ ಅನುಷ್ಠಾನವಾಗಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಚಿತ್ರದುರ್ಗ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆ ಬಳಿಕ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, “ವಲಸೆ ತಪ್ಪಿಸಲು ಮನರೇಗಾ ಅಡಿಯಲ್ಲಿ ಗ್ರಾಮೀಣ ಭಾಗದ ಕಾರ್ಮಿಕರಿಗೆ ನೂರು ದಿನಗಳ ಕೆಲಸ ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ‌ಕೇಂದ್ರ ಸರ್ಕಾರದ ಹೊಸ ನೀತಿಗಳ ಬದಲಾವಣೆಯಿಂದಾಗಿ ಕಾರ್ಮಿಕರಿಗೆ ಸರಿಯಾಗಿ 100 ದಿನಗಳ ಖಾತ್ರಿ ಕೆಲಸವೂ ಸಿಗುತ್ತಿಲ್ಲ. ಉದ್ಯೋಗ ಖಾತ್ರಿಗೆ ಕೇಂದ್ರ ಸರ್ಕಾರ ಪ್ರತಿ ವರ್ಷ ಬಜೆಟ್‌ನಲ್ಲಿ ಹಣ ಕಡಿಮೆ ಮಾಡುತ್ತ ಬರುತ್ತಿದ್ದು, ಕಾರ್ಮಿಕರ ಕೆಲಸದ ಹಕ್ಕನ್ನು ಕಿತ್ತುಕೊಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮಕ್ಕಳು ಮತ್ತು ಮಹಿಳೆಯರು ಅಪೌಷ್ಟಿಕತೆ, ದೌರ್ಬಲ್ಯದಿಂದ ಬಳಲುತ್ತಿದ್ದು, ದಿನಬಳಕೆ ಸಾಮಗ್ರಿಗಳು ಗಗನಕ್ಕೇರಿವೆ. ಅವುಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲು ಕ್ರಮ ಕೈಗೊಳ್ಳಬೇಕು. ಅಶಕ್ತ, ವಿಧವೆ ಮಹಿಳೆಯರಿಗೆ ಪ್ರತ್ಯೇಕ ನ್ಯಾಯಬೆಲೆ ಪಡಿತರ ಚೀಟಿ ವಿತರಣೆ ಮಾಡಬೇಕು.‌ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರ ರಾಗಿ, ಜೋಳ, ತೊಗರಿ ಬೇಳೆ ಹಾಗೂ ಎಣ್ಣೆಯಂತಹ ಪದಾರ್ಥಗಳನ್ನು ನ್ಯಾಯಬೆಲೆ ಅಂಗಡಿಯ ಮೂಲಕ ವಿತರಿಸಬೇಕು. ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಸಲ್ಲಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, “ಕೇಂದ್ರ ಸರ್ಕಾರ ಮನರೇಗಾಕ್ಕೆ ತಮ್ಮ ಬಜೆಟ್‌ನಲ್ಲಿ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕು. ಈ ವರ್ಷ ಕೆಲಸ ಮಾಡಿದ ಕಾರ್ಮಿಕರ ಬಾಕಿ ಕೂಲಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಒಂದು ಕುಟುಂಬಕ್ಕೆ 200 ದಿನಗಳ ಕೆಲಸದ ಉದ್ಯೋಗ ಮತ್ತು ಪ್ರತಿದಿನದ ಕೂಲಿಯನ್ನು ₹600ಕ್ಕೆ ಏರಿಸಬೇಕು. ಕೂಲಿ ಕೆಲಸದ ಸಮಯದಲ್ಲಿ ಮರಣ ಹೊಂದಿದರೆ ಪರಿಹಾರವನ್ನು ₹5 ಲಕ್ಷಗಳಿಗೆ ಏರಿಸಬೇಕು ಎನ್ನುವ ಬೇಡಿಕೆಗಳೊಂದಿಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಮಿಕರು ಪ್ರತಿಭಟನೆ ನೆಡೆಸುತ್ತಿದ್ದು, ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಕೂಡಲೇ ಕಾರ್ಯಗತಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ಹೆಚ್ಚಿನ ಬಿಸಿಯನ್ನು ಎದುರಿಸಬೇಕಾಗುತ್ತದೆ” ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಸಹಕಾರಿ ಬ್ಯಾಂಕ್‌ಗೆ ನಬಾರ್ಡ್ ಅವಶ್ಯಕತೆ ಇಲ್ಲ: ಆರ್ ಎಂ ಮಂಜುನಾಥ ಗೌಡ

ಪ್ರತಿಭಟನೆಯಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆಯ ಪದಾಧಿಕಾರಿಗಳಾದ ತೇಜೇಶ್ವರಿ, ಗಂಗಮ್ಮ ಅನುಸೂಯಮ್ಮ, ಮಂಜಪ್ಪ, ಪುಟ್ಟಮ್ಮ, ಪಾಲಮ್ಮ, ಬಸವರಾಜ್, ಆನಂದ, ನೇತ್ರಾವತಿ, ವಿನುತ, ಭಾರತಿ, ಮಂಜಪ್ಪ, ಶಿವಣ್ಣ, ಶಶಿಕುಮಾರ, ರಾಜಪ್ಪ, ಸುಲೋಚನಮ್ಮ, ನಾಗಪ್ಪ, ನಿರ್ಮಲ, ದುರುಗಪ್ಪ ಮತ್ತು ಇತರ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...