ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

Date:

Advertisements

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು ಪತ್ರವನ್ನು ಇ-ಸ್ವತ್ತು ಎಂಬ ದಾಖಲೆಗೆ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪಂಚಾಯತ್‌ ಸಿಇಒ ದಿವಾಕರ್‌ ʼಮನೆ ಬಾಗಿಲಿಗೆ ಇ-ಸ್ವತ್ತುʼ ಎಂಬ ಜನಸ್ನೇಹಿ ಕಾರ್ಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಮನೆಯನ್ನು ಹಳೆಯ ದಾಖಲೆಗಳಿಂದ ಇ-ಸ್ವತ್ತಿಗೆ ಎಲ್ಲ ಮನೆ ಮಾಲೀಕರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಬದಲಾಯಿಸಿಕೊಳ್ಳಬೇಕಾಗಿತ್ತು. ಹಾಗಾಗಿ ಇ-ಸ್ವತ್ತುಗಳನ್ನು ಪಡೆಯಲು ಗ್ರಾಮಸ್ಥರು ಪಂಚಾಯಿತಿಗೆ ಅಲೆಯಬೇಕಿತ್ತು. ಅಲ್ಲದೆ, ಗ್ರಾಮ ಪಂಚಾಯಿತಿಗಳಲ್ಲಿ ಕೆಲವೊಮ್ಮೆ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆಯೂ ಕೇಳಿ ಬರುತ್ತಿತ್ತು. ಇಂತಹ ಭ್ರಷ್ಟಾಚಾರ ಮತ್ತು ಗ್ರಾಮಸ್ಥರ ಅಲೆದಾಟವನ್ನು ತಪ್ಪಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಒ ದಿವಾಕರ್ ಮನೆ ಮನೆಗೆ ಇ-ಸ್ವತ್ತು ಕಾರ್ಯಕ್ರಮವನ್ನು ಆರಂಭಿಸಿದ್ದರು.

ಮನೆಯ ಬಾಗಿಲಿಗೆ ಹೋಗಿ ಇ-ಸ್ವತ್ತು ನೀಡಿದ್ದರು. ಇಂತಹ ಒಂದು ನೂತನ ಕಾರ್ಯಕ್ರಮ ಬಹಳಷ್ಟು ಪ್ರಶಂಸೆಗೆ ಒಳಗಾಗಿತ್ತು. ವಿಧಾನ ಸಭೆ ಚುನಾವಣೆ ಬಂದಿದ್ದರಿಂದ ಇ-ಸ್ವತ್ತು ಅಭಿಯಾನ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಆರಂಭಗೊಂಡಿದ್ದು, ಶುಕ್ರವಾರ ಸಿಇಒ ದಿವಾಕರ್ ಅವರು ಹೊಸದುರ್ಗದ ಸಾಣೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಇ-ಸ್ವತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮನೆ ಬಾಗಿಲಿಗೆ ಹೋಗಿ ಇ-ಸ್ವತ್ತು ಪ್ರಮಾಣ ಪತ್ರ ವಿತರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಈ ಸಂದರ್ಭದಲ್ಲಿ ಹೊಸದುರ್ಗ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿಶ್ವನಾಥ್, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು, ಪಿಡಿಒ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X