ಕೇವಲ ಒಂದು ಬಿರಿಯಾನಿಗಾಗಿ ಮತಾಂತರ: ಬಿಜೆಪಿ ಸಚಿವ ನಾರಾಯಣಸ್ವಾಮಿಯ ಆಕ್ಷೇಪಾರ್ಹ ಹೇಳಿಕೆ

Date:

ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ, ಜಿಲ್ಲೆಯ ಜನರಲ್ಲಿ ಅಸಮಾಧಾನ ಹುಟ್ಟುಹಾಕಿದೆ.

- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಮತಾಂತರಗಳು ನಡೆಯುತ್ತಿವೆ ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪ ಮಾಡಿದ್ದರು. ಇದೀಗ, ಅವರ ಆರೋಪವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ, ಜಿಲ್ಲೆಯ ಜನರು ಬಿರಿಯಾನಿಗಾಗಿ ಮತಾಂತರವಾಗುತ್ತಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಶೇ.30ರಷ್ಟು ಮತಾಂತರ ಪ್ರಕ್ರಿಯೆ ನಡೆದಿದೆ. ಕರ್ನಾಟಕದ ಜಿತ್ರದುರ್ಗ ಜಿಲ್ಲೆಯಲ್ಲಿಯೂ ಮತಾಂತರ ನಡೆಯುತ್ತಿದ್ದು, ನಮ್ಮ ಮಾದಿಗ ಸಮುದಾಯದ ಜನರನ್ನು ಮತಾಂತರಗೊಳಿಸಲಾಗುತ್ತಿದೆ. ಅವರು ಆರ್ಥಿಕವಾಗಿ ಹಿಂದುಳಿದಿರುವುದನ್ನೇ ದುರ್ಲಾಭ ಮಾಡಿಕೊಳ್ಳಲಾಗುತ್ತಿದೆ. ಅದು ಯಾವ ಮಟ್ಟಕ್ಕಿದೆ ಎಂದರೆ, ಒಂದು ಬಿರಿಯಾನಿ ಕೊಟ್ಟರೂ ಸಾಕು ಜನರು ಮತಾಂತರವಾಗುತ್ತಾರೆ” ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಮತಾಂತರದಿಂದ ಯಾರೂ ಸಮಾಜದಲ್ಲಿ ಮುನ್ನೆಲೆಗೆ ಬರಲು ಸಾಧ್ಯವಿಲ್ಲ. ಅದನ್ನು ಅರಿತೇ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈಗ, ಆ ಕಾಯ್ದೆಯನ್ನು ಕಾಂಗ್ರೆಸ್‌ ಕಿತ್ತಾಕಲು ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....