ಚಿತ್ರದುರ್ಗ | ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು: ಸಹಾಯಕ ನಿರ್ದೇಶಕ

Date:

Advertisements

ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆ‌ರ್ ರಜನಿಕಾಂತ್‌ ರೈತರಿಗೆ ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಲಾಭದಾಯಕ ಹೈನುಗಾರಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಖರ್ಚು ವೆಚ್ಚವನ್ನು ಲೆಕ್ಕವಿಟ್ಟು ವೈಜ್ಞಾನಿಕವಾಗಿ ಉತ್ತಮ ತಳಿಯ ಹಸು ಎಮ್ಮೆಗಳನ್ನು ಖರೀದಿಸಿ, ಕೊಟ್ಟಿಗೆ ಮತ್ತು ಪೋಷಕಾಂಶ ಮೇವಿನ ನಿರ್ವಹಣೆ ಮಾಡಬೇಕು. ರಾಸುಗಳ ಆರೋಗ್ಯ ನಿರ್ವಹಣೆಯ ಕುರಿತು ರೈತರು ಈ ತರಬೇತಿಯಲ್ಲಿ ನೀಡಲಾಗುವ ಮಾಹಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Advertisements

ಹೈನುಗಾರಿಕೆ ಒಂದು ಪರಿಸರ ಸ್ನೇಹಿ ಕೃಷಿ ಉಪಕಸುಬಾಗಿದ್ದು, ರೈತರ ಆರ್ಥಿಕ ಮಟ್ಟ, ಜನರ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿಯಾಗಿದ್ದು ರೈತರು ಸ್ವಾವಲಂಬನೆಯ ಜೀವನ ನಡೆಸಲು ಅನುಕೂಲಕರವಾಗಿದೆ. ಭಾರತ ದೇಶವು ಇಡೀ ಪ್ರಪಂಚದಲ್ಲಿ ಹಾಲಿನ ಉತ್ಪಾದನೆಯಲ್ಲಿ ಮುಂದಿದೆ. ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್ ರಾಜ್ಯಗಳು ದೇಶದ ಒಟ್ಟು ಹಾಲಿನ ಉತ್ಪಾದನೆಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಹಾಲು ಉತ್ಪಾದಿಸುತ್ತಿವೆ. ಕರ್ನಾಟಕ ರಾಜ್ಯ 9ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ರೈತಪರ ಚಿಂತಕ ಹಾಗೂ ನೀರಾವರಿ ಹೋರಾಟಗಾರ ಕಸವನಹಳ್ಳಿ ರಮೇಶ್ ಮಾತನಾಡಿ, ಹಿಂದೆ ಕೃಷಿಯಲ್ಲಿ ಹಸು ಸಾಕಾಣಿಕೆಯು ಅನಿವಾರ್ಯವಾಗಿತ್ತು. ಹೈನುಗಾರಿಕೆಯು ರೈತರ ಜೀವನ ಮಟ್ಟ ಸುಧಾರಿಸಲು ಆಧಾರವಾಗಿದೆ. ಕೋಲಾರದಲ್ಲಿ ಹಸು ಸಾಕಾಣಿಕೆಯಲ್ಲಿ ಅನುಸರಿಸುವ ವೈಜ್ಞಾನಿಕ ಪದ್ಧತಿ ಮತ್ತು ಅಲ್ಲಿನ ಜನರ ಕೃಷಿಯ ಮೇಲಿನ ಬದ್ಧತೆಯನ್ನು ನೋಡಿ ಜಿಲ್ಲೆಯ ರೈತರು
ಅದನ್ನು ಅನುಸರಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರವೇ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹ

ಹಿರಿಯೂರು ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಾಗರಾಜ್, ಎಮ್ಮೆ ಮತ್ತು ಹಸುಗಳಲ್ಲಿ ಲಾಭದಾಯಕ ಹೈನುಗಾರಿಕೆಗೆ ಉತ್ತಮ ತಳಿ ಆಯ್ಕೆ ಮಾಡಿಕೊಳ್ಳುವ ಹಲವು ಮಾಹಿತಿಯನ್ನು ನೀಡಿದರು. ಗಿಡಕ್ಕೆ ನೀರೆರೆಯುವ ಮೂಲಕ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ,ಸಹಾಯಕ ಕೃಷಿ ನಿರ್ದೇಶಕಿ ಉಷಾರಾಣಿ, ಕೃಷಿ ಅಧಿಕಾರಿ ಪವಿತ್ರಾ,ಎಂ.ಜೆ,ಬಬ್ಬೂರು ಕೇಂದ್ರದ ಸಿಬ್ಬಂದಿ, ರೈತರು ಉಪಸ್ಥಿತರಿದ್ದರು. ವಿವಿಧ ಭಾಗದಿಂದ ಆಗಮಿಸಿದ ರೈತ ಪಶು ಸಾಕಣಿಕೆ ಕುರಿತು ತರಬೇತಿ ಪಡೆದುಕೊಂಡರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X