ಚಿತ್ರದುರ್ಗ | ಸ್ಮಶಾನ ಭೂಮಿ ಒತ್ತುವರಿ ತೆರವಿಗೆ ದಸಂಸ ಆಗ್ರಹ

Date:

ಕೊಂಡಾಪುರ ಗ್ರಾಮದ ಸರ್ವೆ ನಂಬರ್ 22ರಲ್ಲಿ 2.34 ಎಕರೆ ಸರ್ಕಾರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಲಾಗಿದೆ. ಆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದ್ದು, ಹೊಳಲ್ಕೆರೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, “ಸುಮಾರು ಎರಡ್ಮೂರು ತಲೆಮಾರುಗಳಿಂದ ಈ ಜಾಗದಲ್ಲಿ ಎಸ್‌ಸಿ ಜನಾಂಗದವರು ಸ್ಮಶಾನವನ್ನು ಮಾಡಿಕೊಂಡು ತಮ್ಮ ಹಿರಿಯರನ್ನು ಅಲ್ಲಿಯೇ ಶವ ಸಂಸ್ಕಾರ ಮಾಡುತ್ತಾ ಬಂದಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕೊಂಡಾಪುರ ಗ್ರಾಮದ ಕೆಲ ರೈತರುಗಳು ಈ ಜಾಗವನ್ನು ಒತ್ತುವರಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಈ ವಿಷಯ ಸಂಬಂಧ ತಹಶೀಲ್ದಾರ್ ಮತ್ತು ಪೊಲೀಸ್ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಈಗ ಶವಸಂಸ್ಕಾರ ಮಾಡಲು ಒಂದು ಗೆರೆ ಕೂಡ ಜಾಗ ಇಲ್ಲದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಭೂಮಾಪನ ಇಲಾಖೆಯ ಸರ್ವೇಯರ್ ಕಳುಹಿಸಿ ಸ್ಥಳ ಪರಿಶೀಲಿಸಿ ಸರ್ವೆ ನಂಬರ್ 22ರ ಸರ್ಕಾರಿ ಜಾಗವನ್ನು ಬಿಡಿಸಿಕೊಟ್ಟು, ಈ ಜಾಗವನ್ನು ಎಸ್‌ಸಿ ರುದ್ರ ಭೂಮಿಯಾಗಿ ಮೀಸಲಿಟ್ಟು ಅಭಿವೃದ್ಧಿ ಮಾಡಿಕೊಡಬೇಕು. ಹಾಗಾಗಿ ತಾವುಗಳು ಕೂಡಲೇ ಮಧ್ಯ ಪ್ರವೇಶಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಘರ್ಷ ಸಮಿತಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಒತ್ತುವರಿದಾರರಿಂದ ನಮಗೆ ತೊಂದರೆಯಾಗುತ್ತಿದ್ದು, ಶವ ಸಂಸ್ಕಾರಕ್ಕೆ ಜಾಗವಿಲ್ಲದಂತಾಗಿದೆ. ಅವರಿಂದ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ಬಿಡಿಸಿಕೊಟ್ಟು ಶವ ಸಂಸ್ಕಾರಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ದಸಂಸ ಮುಖಂಡ ಕೆಂಗುಂಟೆ ಜಯಣ್ಣ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಮನವಿ ಸ್ವೀಕರಿಸಿ ಮಾತನಾಡಿ, “ಭೂಮಾಪನ ಇಲಾಖೆಯಲ್ಲಿ ಸರ್ವೆಯರ್‌ಗಳ ಸಂಖ್ಯೆ ಕಡಿಮೆ ಇದೆ. ಶೀಘ್ರದಲ್ಲಿ ಅಳತೆ ನಡೆಸುವಂತೆ ಹೇಳಿದ್ದೇನೆ. ಜಾಗವನ್ನು ಗುರುತಿಸಿದ ಬಳಿಕ ಕ್ರಮ ಕೈಗೊಂಡು ಸ್ಮಶಾನಕ್ಕೆ ಜಾಗ ಕೊಡಿಸಲು ತಾಲೂಕು ಆಡಳಿತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ತಾಲೂಕು ಸಂಚಾಲಕ ಕೆ ಆರ್‌ ಸುಂದರ ಮೂರ್ತಿ, ವಿಜಯಕುಮಾರ್ ಮೂರ್ತಪ್ಪ, ನವೀನ್ ಮದ್ದೇರು, ಎನ್ ಪ್ರಭಾಕರ್, ವಿಜಯ್, ಶಿವಮೂರ್ತಿ, ಕರಿಯಪ್ಪ, ಮಂಜುನಾಥ, ಸಂಗಪ್ಪ, ವೆಂಕಟೇಶ್, ರಮೇಶ್, ರಘು ಹಾಗೂ ಕೊಂಡಾಪುರ ಗ್ರಾಮಸ್ಥರು, ದಲಿತ ಸಂಘರ್ಷ ಸಮಿತಿಯ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...