ಚಿತ್ರದುರ್ಗ | ರೈತರಿಂದ ರಾಗಿ ಖರೀದಿಗೆ ನಿರ್ಧಾರ: ಡಿಸೆಂಬರ್ 1ಕ್ಕೆ ನೋಂದಣಿ ಆರಂಭ

Date:

Advertisements

ರೈತರಿಂದಲೇ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್‍ಗೆ 4290 ರೂ. ದರ ನಿಗದಿ ಮಾಡಲಾಗಿದೆ. ಜಿಲ್ಲೆಯ ರೈತರು ನೋಂದಣಿ ಮಾಡಿಕೊಳ್ಳುವ ರಾಗಿ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ರಾಗಿ ಖರೀದಿಗೆ ಸಂಬಂಧಿಸಿದಂತೆ ಡಿಸೆಂಬರ್ 1 ರಿಂದ 31 ರವರೆಗೆ ನೋಂದಣಿ ನಡೆಯಲಿದೆ. ಮುಂಬರುವ 2025 ಜನವರಿ 01 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಹೊಳಲ್ಕೆರೆ, ಹೊಸದುರ್ಗ ಹಾಗೂ ಚಿತ್ರದುರ್ಗ ತಾಲೂಕಿನ ರೈತರು ಹೆಚ್ಚು ರಾಗಿ ಬಿತ್ತನೆ ಮಾಡಿದ್ದಾರೆ. ಉತ್ತಮ ಇಳುವರಿಯ ನಿರೀಕ್ಷೆ ಇದ್ದು, ನೇರವಾಗಿ ರೈತರಿಂದಲೇ ರಾಗಿ ಖರೀದಿ ಮಾಡಲು ಹೊಸದುರ್ಗ ತಾಲೂಕಿನಲ್ಲಿ ಹೆಚ್ಚುವರಿಯಾಗಿ ರಾಗಿ ಖರೀದಿ ಕೇಂದ್ರ ಸ್ಥಾಪಿಸಬೇಕು. ರಾಗಿ ಮಾರಾಟ ಮಾಡುವ ರೈತರ ಪಹಣಿಯಲ್ಲಿ ರಾಗಿ ಎಂದು ನಮೂದು ಆಗಿರುವುದು ಕಡ್ಡಾಯವಾಗಿದೆ. ಮಧ್ಯವರ್ತಿಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

Advertisements

ರೈತರ ಪಹಣಿಯಲ್ಲಿ ಬೆಳೆ ನಮೂದು ಮಾಡುವಲ್ಲಿ ವ್ಯತ್ಯಾಸ ಕಂಡುಬಂದರೆ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಖರೀದಿ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಕೃಷಿ ಇಲಾಖೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ ಖರೀದಿ ಕುರಿತು ರೈತರಿಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಸರ್ಕಾರದಿಂದ ನೇಮಿಸಲ್ಪಟ್ಟ ಸಂಗ್ರಹಣಾ ಏಜೆನ್ಸಿಗಳು ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡಗಳ ಅನ್ವಯ ಎಫ್.ಎ.ಕ್ಯೂ ಗುಣಮಟ್ಟ ಆಧರಿಸಿ ರಾಗಿ ಖರೀದಿಸಬೇಕು.ರಾಗಿ ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಲು ಸೂಚಿಸಲಾಗಿದೆ.‌ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನೇಮಿಸಿರುವ ಗುಣಮಟ್ಟ ಪರೀಕ್ಷಕರು ಮತ್ತು ಗ್ರೇಡರ್‍ಗಳು ಜಂಟಿಯಾಗಿ ರಾಗಿ ಗುಣಮಟ್ಟ ದೃಢೀಕರಿಸಬೇಕು. ಖರೀದಿ ಕೇಂದ್ರದಲ್ಲಿ ಕೃಷಿ ಇಲಾಖೆಯಿಂದ ಗ್ರೇಡರ್‌ಗಳನ್ನು ನೇಮಿಸಬೇಕು. ರಾಗಿ ಖರೀದಿ ಹಾಗೂ ಮಾನದಂಡಗಳ ಕುರಿತು ವ್ಯಾಪಕ ಪ್ರಚಾರದೊಂದಿಗೆ ರೈತರಿಗೆ ಸೂಕ್ತ ಮಾಹಿತಿ ತಿಳಿಸಬೇಕು ಎಂದು ಸೂಚಿಸಿದರು.

ಖರೀದಿ ಕೇಂದ್ರಗಳಲ್ಲಿ ರೈತರ ಬೆಳೆಗಳ ದಾಸ್ತಾನು ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇದರೊಂದಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ರೈತರ ಫ್ರೂಟ್ಸ್ ದಾಖಲೆಗಳ ಮೂಲಕ ನೋಂದಣಿ ಮಾಡುವಲ್ಲಿ ಯಾವುದೇ ಗೊಂದಲಗಳು ಉಂಟಾಗಬಾರದು ಎಂದು ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಮಹಾರಾಷ್ಟ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲು ಇವಿಎಂ ದುರ್ಬಳಕೆ: ವಸಂತ ಕುಮಾರ್

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಮಾತನಾಡಿ, 2022-23ನೇ ಸಾಲಿನಲ್ಲಿ ರೂ.3578 ಬೆಂಬಲ ಬೆಲೆಯಡಿ ಒಟ್ಟು 21,715 ಮೆಟ್ರಿಕ್ ಟನ್ ಹಾಗೂ 2023-24ನೇ ಸಾಲಿನಲ್ಲಿ ರೂ.3846 ಬೆಂಬಲ ಬೆಲೆಯಡಿ 1832.60 ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಗಿತ್ತು. ಈ ಬಾರಿ ರಾಗಿಗೆ ರೂ.4290 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಜಿಲ್ಲೆಯಲ್ಲಿ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಎ.ಪಿ.ಎಂ.ಸಿ ಯಾರ್ಡ್‌ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನಲ್ಲಿ ಹೆಚ್ಚಿನ ದಾಸ್ತಾನು ಬಂದರೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸಹ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಡಿವೈಎಸ್‍ಪಿ ದಿನಕರ್, ತಹಶೀಲ್ದಾರ್‍ಗಳು, ಎ.ಪಿ.ಎಂ.ಸಿ ಕಾರ್ಯದರ್ಶಿಗಳು, ಇತರ ಅಧಿಕಾರಿಗಳು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X